ಫಿಫಾ ವಿಶ್ವಕಪ್ ಫೈನಲ್​ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಸಿಎಂ ಡಿ.ಕೆ. ಶಿವಕುಮಾರ್ ಮನವಿ! FIFA World Cup 2026

ಫಿಫಾ ವಿಶ್ವಕಪ್ ಫೈನಲ್​ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಸಿಎಂ ಡಿ.ಕೆ. ಶಿವಕುಮಾರ್ ಮನವಿ! FIFA World Cup Final
ಫಿಫಾ ವಿಶ್ವಕಪ್ ಫೈನಲ್​ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಸಿಎಂ ಡಿ.ಕೆ. ಶಿವಕುಮಾರ್ ಮನವಿ! FIFA World Cup Final
Published on

ಪ್ರಮುಖ ಮುಖ್ಯಾಂಶಗಳು

  • ಫಿಫಾ ವಿಶ್ವಕಪ್ ಫೈನಲ್ ವೀಕ್ಷಣೆಗೆ ಬೆಳಗಿನ ಜಾವದವರೆಗೆ ಹೋಟೆಲ್ ತೆರೆಯಲು ವಿಶೇಷ ಅನುಮತಿ ನೀಡಿದ ಸಿಎಂ ಡಿ ಕೆ ಶಿವಕುಮಾರ್
  • ಫುಟ್ಬಾಲ್ ಪಂದ್ಯ ವೀಕ್ಷಿಸುವ ಯುವಜನರು ತಾಳ್ಮೆ ಕಳೆದುಕೊಳ್ಳದೆ ಶಾಂತಿಯುತವಾಗಿ ವರ್ತಿಸುವಂತೆ ಮುಖ್ಯಮಂತ್ರಿಗಳ ಮನವಿ
  • ರಾಜ್ಯದಲ್ಲಿ ಎಲ್ಲೆಡೆ ಪೊಲೀಸರು ಕ್ಯಾಮರಾ ಅಳವಡಿಸಿದ್ದು ಕಾನೂನು ಕೈಗೆತ್ತಿಕೊಳ್ಳದಂತೆ ಎಚ್ಚರಿಕೆ ನೀಡಿದ ಡಿಕೆ ಶಿವಕುಮಾರ್
  • ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾನುವಾರವೂ ಡಿಸಿ ಹಾಗೂ ಸಿಇಓಗಳ ಜೊತೆ ವಿಡಿಯೋ ಸಂವಾದ ನಡೆಸಿದ ಸಿಎಂ
ಬೆಂಗಳೂರು: ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ( FIFA World Cup Final ) ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆಶಿ, ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಬರ ಪರಿಸ್ಥಿತಿ: ನಮಗೆ, ನಿಮಗೆ ಭಾನುವಾರ, ರಜೆ ಎಂಬುದಿಲ್ಲ

ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಭಾನುವಾರ ಎಂಬುದು ಇಲ್ಲ. 24 ಗಂಟೆಗಳ ಕಾಲವೂ ಕೆಲಸ ಮಾಡಬೇಕು. ಹಾಗಾಗಿ ಬರಗಾಲಕ್ಕೆ ಸಿದ್ಧತೆ ಕೈಗೊಳ್ಳುವ ಬಗ್ಗೆ ಡಿಸಿ, ಸಿಇಓಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕುಡಿಯುವ ನೀರು: ಪ್ರತಿ ತಾಲ್ಲೂಕಿಗೆ ಒಂದು ಕೋಟಿ ರೂಪಾಯಿ

ಈಗಾಗಲೇ ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಒಂದು ಕೋಟಿ ರೂ.ಗಳ ಅನುದಾನ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net