ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆ ಆಗುವಂತಹ ಯೋಜನೆ ತರುವುದಕ್ಕೂ ಮುನ್ನ ರಾಜ್ಯಗಳ ಗಮನಕ್ಕೆ ತರಬೇಕು. ಸಂವಿಧಾನ ವಿರೋಧಿಯಾಗಿ ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಹೋರಾಟ ಮಾಡುತ್ತೇವೆ ಎಂದರು.