ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ

Find a solution to the water problem
Find a solution to the water problem
Published on
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ಪುರಸಭೆ ಆಡಳಿತಾಧಿಕಾರಿಯೂ ಆದ ತಿಪಟೂರು ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ಅಧಿಕಾರಿಗಳಿಗೆ ಸೂಚಿಸಿದರು.
ಪುರಸಭೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್​ವೆಲ್​ ಕೊರೆಯಲು ಆದೇಶ ನೀಡಿದ್ದರೂ ಕ್ರಮಕೈಗೊಂಡಿಲ್ಲ. 13 ಬೋರ್​ವೆಲ್​ಗಳಿಗೆ ಪೈಪ್​ ಬಿಡಲು ಪಟ್ಟಿ ಸಿದ್ಧಮಾಡಿದ್ದೀರಿ, ಇವು ಎಷ್ಟು ನೀರಿನ ಮಟ್ಟ ಇದೆ ಹಾಗೂ ಇದರ ಸುಸ್ಥಿತಿಯಲ್ಲಿವಿಯೇ ಎಂಬುದರ ಬಗ್ಗೆ ಸಂಬಂಧಪಟ್ಟ ಭೂವಿಜ್ಞಾನಿಯಿಂದ ಮಾಹಿತಿ ಪಡೆದಿಲ್ಲ ಎಂದು ಕಿಡಿಕಾರಿದರು.
ನಾಗರಿಕರಿಂದ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಇಂಜಿನಿಯರ್​ ಹಾಗೂ ಮುಖ್ಯಾಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು. ಅಲ್ಲದೇ ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಜನರ ಸಮಸ್ಯೆಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು. ಮುಖ್ಯಾಧಿಕಾರಿ ಮಂಜಮ್ಮ ಮಾತನಾಡಿ, ಕುಡಿಯುವ ನೀರಿನ ಬಗ್ಗೆ ಇಂಜಿನಿಯರ್​ಗೆ ಸೂಚನೆ ನೀಡಿದ್ದು, ನೀರಿನ ಅಭಾವ ಹೆಚ್ಚಾಗಿರುವ ವಾರ್ಡ್​ಗಳಿಗೆ ಪುರಸಭೆಯ ಟ್ಯಾಂಕರ್​ ಮೂಲಕ ಹಾಗೂ ಖಾಸಗಿ ಟ್ಯಾಂಕರ್​ ಮೂಲಕ ನೀರು ಪೂರೈಸಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net