ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ದಂಡ

Fine for using banned plastic
Fine for using banned plastic
Published on
ಹುಳಿಯಾರು: ಪಟ್ಟಣದಲ್ಲಿ ಪ್ಲಾಸ್ಟಿಕ್ ನಿಷೇದಿಸಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಕವರ್‌ಗಳನ್ನು ದಾಸ್ತಾನು ವಾಡಿಕೊಂಡು ಬಳಕೆ ವಾಡುತ್ತಿದ್ದ ಅಂಗಡಿಗಳ ಮೇಲೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಸಾವಿರಾರು ರೂ. ಬೆಲೆ ಬಾಳುವ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಹುಳಿಯಾರು ಬಸ್ ನಿಲ್ದಾಣದಲ್ಲಿನ ದಿನಸಿ ಅಂಗಡಿ, ಬಾಳೆಹಣ್ಣು, ಹೂ, ತರಕಾರಿ ಅಂಗಡಿಗಳು ಸೇರಿ ಸುವಾರು ಐವತ್ತಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಹ್ಯಾಂಡ್ ಕವರ್ ಹಾಗೂ ಥರ್ವಾಕೋಲ್ ತಟ್ಟೆಗಳನ್ನು ವಶಪಡಿಸಿಕೊಂಡು ಎಚ್ಚರಿಸಿದ್ದಾರೆ.
ಹುಳಿಯಾರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಹುಳಿಯಾರು ಪಟ್ಟಣದಲ್ಲಿ ಸಂಗ್ರಹವಾಗುತ್ತಿರುವ ಕಸದಲ್ಲಿ ಶೇ.80 ಪ್ಲಾಸ್ಟಿಕ್ ಕವರ್ ಹಾಗೂ ಥರ್ಮಕೋಲ್ ತಟ್ಟೆಗಳಿದ್ದು, ಪಟ್ಟಣ ಪ್ಲಾಸ್ಟಿಕ್ ಮಯವಾಗುತ್ತಿದೆ. ಪ್ಲಾಸ್ಟಿಕ್ ಚೀಲಗಳ ಕಸದ ರಾಶಿಯೇ ಪರಿಸರದ ಸ್ವಚ್ಛತೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಹಲವು ಅಂಗಡಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ದಂಡ ಸೇರಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net