ಚಿಕ್ಕೋಡಿ : ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ನಿಪ್ಪಾಣಿ ಪಟ್ಟಣದ ನಿವಾಸಿ ಸುಪ್ರಿಯಾ ವಿಠಲ ಬಾಗೆ ಅವರಿಗೆ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ 25 ಸಾವಿರ ರೂ.ದಂಡ ವಿಧಿಸಿದೆ.
ಈಚೆಗೆ ಬಾಲಕನನ್ನು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾವಣೆ ಮಾಡಿದ್ದರ ಕುರಿತು ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕ ವಾಹನ ಓಡಿಸಲು ಅವಕಾಶ ನೀಡಿದ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.