ಪಟ್ಟಣದಲ್ಲಿ ರಸ್ತೆ ಬದಿ, ಎಲ್ಲೆಂದರಲ್ಲಿ ಅನಧಿಕೃತವಾಗಿ ದ್ವಿಚಕ್ರ ವಾಹನಗಳು, ಕಾರುಗಳು ಸೇರಿ ನಾಲ್ಕು ಚಕ್ರಗಳ ವಾಹನಗಳು ಹಾಗೂ ಇತರ ಭಾರಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದವರಿಗೆ ಆನೇಕಲ್ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ಪಟ್ಟಣದ ಪ್ರಮುಖ ವೃತ್ತಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾಗಿಡ್ಡಿಯಾಗಿ ನಿಲ್ಲಿಸುವುದರಿಂದ ಸಾರ್ವಜನಿಕರಮುಕ್ತ ಓಡಾಟಕ್ಕೆ ಹಾಗೂ ಇತರ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ನಿಬಂಧನೆಗಳನ್ನು ಉಲ್ಲಂಸಿ ನಿಲ್ಲಿಸುವ ವಾಹನಗಳ ಚಕ್ರಗಳಿಗೆ "ವ್ಹೀಲ್ ಲಾಕ್' ಹಾಕುವ ಮೂಲಕ ಸ್ಥಳದಲ್ಲೇ ದಂಡ ವಿಧಿಸಲಾಗುತ್ತಿದೆ.
ಸುಗಮ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಈ ಕಠಿಣ ಹೆಜ್ಜೆ ಇಟ್ಟಿದ್ದು, ವಾಹನ ಸವಾರರು ಕಡ್ಡಾಯವಾಗಿ ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲ್ಲಿಸಬೇಕು. ಅನಗತ್ಯ ದಂಡದ ಹೊರೆಯಿಂದ ಪಾರಾಗಬೇಕು ಎಂದು ಮನವಿ ಮಾಡಿದ್ದಾರೆ.
ನಿಯಮ ಉಲ್ಲಂಸಿ ರಸ್ತೆ ಸುರಕ್ಷತೆಗೆ ಅಡ್ಡಿ ಪಡಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.