ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮನ್ವಿತ್‌ನ ಕಾರ್ಯವನ್ನು ಶ್ಲಾಘಿಸಿದ್ದಾರೆ. ‘ತುರ್ತು ಸಂದರ್ಭದಲ್ಲಿ ಮನ್ವಿತ್ ತೋರಿದ ಜಾಗರೂಕತೆ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಬೇಕು’ ಎಂದು ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಲಕನಿಗೆ ಉಜ್ವಲ ಭವಿಷ್ಯ ಸಿಗಲಿ. ಮುಂದೆ ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಜವಾಬ್ದಾರಿಯುತ ನಾಗರಿಕನಾಗಿ ಬೆಳೆದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಅವರು ಹಾರೈಸಿದ್ದಾರೆ.