ಮುಧೋಳದಲ್ಲಿ ಅಗ್ನಿಶಾಮಕ ದಳಕ್ಕೆ ಬಲ

ಮುಧೋಳದ ಅಗ್ನಿಶಾಮಕ ಠಾಣೆಯಲ್ಲಿ ನೂತನ ಅಗ್ನಿಶಾಮಕ ವಾಹನಕ್ಕೆ ಶಾಸಕ ಆರ್.ಬಿ. ತಿಮ್ಮಾಪೂರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಅಶೋಕ ಕಿವಡಿ, ರಾಘು ಮೋಕಾಸಿ ಇತರರಿದ್ದರು.
ಮುಧೋಳದ ಅಗ್ನಿಶಾಮಕ ಠಾಣೆಯಲ್ಲಿ ನೂತನ ಅಗ್ನಿಶಾಮಕ ವಾಹನಕ್ಕೆ ಶಾಸಕ ಆರ್.ಬಿ. ತಿಮ್ಮಾಪೂರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಅಶೋಕ ಕಿವಡಿ, ರಾಘು ಮೋಕಾಸಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಆರ್.ಬಿ. ತಿಮ್ಮಾಪೂರ ಹೇಳಿಕೆ
  • ನೂತನ ಸುಸಜ್ಜಿತ ವಾಹನ ಲೋಕಾರ್ಪಣೆ
ಮುಧೋಳ: ಅಗ್ನಿಶಾಮಕ ದಳಕ್ಕೆ ಮತ್ತಷ್ಟು ಬಲ ಬಂದಿದೆ. ತುರ್ತು ಸಂದರ್ಭಗಳಲ್ಲಿ ಬೆಂಕಿ ಅವಘಡಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಿಸಲು ಈ ವಾಹನ ಪರಿಣಾಮಕಾರಿ ಸಹಾಯವಾಗಲಿದೆ ಎಂದು ಶಾಸಕ ಆರ್.ಬಿ. ತಿಮ್ಮಾಪೂರ ಎಂದರು.
ನಗರದ ಅಗ್ನಿಶಾಮಕ ದಳದ ಕಚೇರಿಯಲ್ಲಿ ಶುಕ್ರವಾರ ನೂತನ ಅಗ್ನಿಶಾಮಕ ವಾಹನ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜನರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಅಧ್ಯಕ್ಷ ಅಶೋಕ ಕಿವಡಿ, ನಗರ ಘಟಕದ ಅಧ್ಯಕ್ಷ ರಾಘು ಮೋಕಾಸಿ, ಅಗ್ನಿಶಾಮಕ ಠಾಣಾಧಿಕಾರಿ ಪಿ.ಎಚ್. ಲಮಾಣಿ ಸೇರಿ ಹಲವರು ಉಪಸ್ಥಿತರಿದ್ದರು.
ತರಕಾರಿ ಮಾರುಕಟ್ಟೆ ಪರಿಶೀಲನೆ: ನಂತರ ಶಾಸಕ ತಿಮ್ಮಾಪೂರ ಅವರು ನಗರದ ರನ್ನ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ, ವ್ಯಾಪಾರಿಗಳು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು. ಹಳೆಯ ಮಾರುಕಟ್ಟೆಯಿಂದ ನೂತನ ಕಟ್ಟಡಕ್ಕೆ ಸ್ಥಳಾಂತರ ಕುರಿತಂತೆ ಅಭಿಪ್ರಾಯ ಸಂಗ್ರಹಿಸಿ, ರೈತರ ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಅಭಿವದ್ಧಿ ಕಾಮಗಾರಿಗಳ ಪರಿಶೀಲನೆ: ಇದಕ್ಕೂ ಮುನ್ನ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಮಳೆಗಾಲ ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ದತ್ತ ಕೆರೆ ಉದ್ಯಾನವನ, ಇಂದಿರಾ ಕ್ಯಾಂಟೀನ್ ಸೇರಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ರಾಜ್ಯ ಮಟ್ಟದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂಬ ಅಭಿಪ್ರಾಯವನ್ನು ಕೂಡ ಅವರು ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net