ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ತಾಯಿ ತೀರಿಕೊಂಡ ಸ್ವಲ್ಪ ಸಮಯದ ಬಳಿಕ ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಇದರಿಂದ ನೇತ್ರಾವತಿಯ ಸಹೋದರಿ ಅನುಮಾನಗೊಂಡು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಬಳಿಕ ಇದು ಕೊಲೆ ಅಂತ ತಿಳಿದು ಬಂದಿದ್ದು,ಕೊಲೆ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ವೇಳೆ ಅಪ್ರಾಪ್ತ ವಯಸ್ಕರು ನೇತ್ರಾವತಿಯನ್ನು ಟವಲ್‌ನಿಂದ ಕತ್ತು ಹಿಸುಕಿ ಕೊಂದು, ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಸೀರೆಯಿಂದ ಸೀಲಿಂಗ್ ಫ್ಯಾನ್‌ಗೆ ನೇತು ಹಾಕಿ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.