ಸರ್ಕಾರದ ಮಾರ್ಗಸೂಚಿ ಪಾಲಿಸಿ

ಯಾದಗಿರಿ ಡಿಸಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ದೇಣಿಗೆ, ಪಾರದರ್ಶಕತೆ, ಸುರಕ್ಷತೆ ಖಚಿತಪಡಿಸಿಕೊಳ್ಳುವ ಕುರಿತು ಕರೆದಿದ್ದ ಸಭೆಯಲ್ಲಿ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಮಾತನಾಡಿದರು. ಜಿಪಂ ಸಿಇಒ ಲವೀಶ್ ಒರ್ಡಿಯಾ, ಹೆಚ್ಚುವರಿ ಪೊಲೀಸ್ ಅಽÃಕ್ಷಕ ಧರಣೇಶ, ಧರ್ಮದತ್ತಿ ಇಲಾಖೆ ಅಽಕಾರಿ ವಿಶ್ವನಾಥ ಇತರರಿದ್ದರು.
ಯಾದಗಿರಿ ಡಿಸಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ದೇಣಿಗೆ, ಪಾರದರ್ಶಕತೆ, ಸುರಕ್ಷತೆ ಖಚಿತಪಡಿಸಿಕೊಳ್ಳುವ ಕುರಿತು ಕರೆದಿದ್ದ ಸಭೆಯಲ್ಲಿ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಮಾತನಾಡಿದರು. ಜಿಪಂ ಸಿಇಒ ಲವೀಶ್ ಒರ್ಡಿಯಾ, ಹೆಚ್ಚುವರಿ ಪೊಲೀಸ್ ಅಽÃಕ್ಷಕ ಧರಣೇಶ, ಧರ್ಮದತ್ತಿ ಇಲಾಖೆ ಅಽಕಾರಿ ವಿಶ್ವನಾಥ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಸೂಚನೆ
  • ದೇವಾಲಯಗಳ ದೇಣಿಗೆ ಭದ್ರತೆ ಕುರಿತು ಸಭೆ
ಯಾದಗಿರಿ : ದೇವಾಲಯದ ಹುಂಡಿ (ದೇಣಿಗೆ ಪೆಟ್ಟಿಗೆಗಳು) ಮತ್ತು ಹುಂಡಿ ನಗದು ಮತ್ತು ಇತರೆ ಚಿನ್ನ, ಬೆಳ್ಳಿ ಇತ್ಯಾದಿಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿಗಳ ಕಚೇರಿಯಲ್ಲಿ ಗುರುವಾರ ಧರ್ಮದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ದೇಣಿಗೆ, ಪಾರದರ್ಶಕತೆ, ಸುರಕ್ಷತೆ ಖಚಿತಪಡಿಸಿಕೊಳ್ಳುವ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ ಕಾಣುವಂತೆ ಹುಂಡಿಗಳನ್ನು ಅಳವಡಿಸಿ, ಸೂಕ್ತ ಭದ್ರತೆ ಒದಗಿಸಬೇಕು. ದೇವಾಲಯದಲ್ಲಿ ಅಳವಡಿಸುವ ಹುಂಡಿಗಳಿಗಳು ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ಯವಾದ ಸಿಸಿ ಟಿವಿ ಕ್ಯಾಮರಾವನ್ನು ಕಡ್ಡಾಯವಾಗಿ ಅಳವಡಿಸಿ ಸಂರಕ್ಷಿಸಬೇಕು ಎಂದು ತಿಳಿಸಿದರು.
ಜಿಲ್ಲಾಽಕಾರಿಗಳ ಹಾಗೂ ಉಪ ವಿಭಾಗಾಽಕಾರಿಗಳ ಕಚೇರಿಯಲ್ಲಿನ ಮುಜರಾಯಿ ವಿಭಾಗದಲ್ಲಿ ಸದರಿ ಕ್ಯಾಮರಾಗಳನ್ನು ನಿರ್ವಹಣೆ ಮಾಡಬೇಕು. ಧಾರ್ಮಿಕ ದತ್ತಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸರ್ವರ್ ಅಳವಡಿಸಿ, ವಸತಿ ಕೋಶದಿಂದ ವೆಬ್ ಕ್ಯಾಮರಾಗಳ ಮೂಲಕ ಎಲ್ಲ ದೇವಾಲಯಗಳಲ್ಲಿ ಅಳವಡಿಸಿರುವ ಕ್ಯಾಮರಾಗಳ ಮೇಲ್ವಿಚಾರಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಭದ್ರತಾ ಹಿತದೃಷ್ಟಿಯಿಂದ ದೇವಾಲಯಗಳಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮರಾಗಳ ಸಂಪರ್ಕವನ್ನು ಸಂಬAಧಪಟ್ಟ ಜಿಲ್ಲಾಽಕಾರಿಗಳ, ಪೋಲೀಸ್ ಅಽÃಕ್ಷಕರ ಮತ್ತು ಪೊಲೀಸ್ ಠಾಣೆಗಳ ಕಚೇರಿಗೆ ಸಂಪರ್ಕ ಕಲ್ಪಿಸಿ, ಅವುಗಳ ವೀಕ್ಷಣೆಗಾಗಿ ಸಂಚಾರ ನಿಯಂತ್ರಣ ಕೊಠಡಿಯಲ್ಲಿರುವಂತೆ ಡ್ಯಾಶ್ ಬೋರ್ಡ್ಗಳ ವ್ಯವಸ್ಥೆ ಕಲ್ಪಿಸುವಂತೆ ಅವರು ಸೂಚಿಸಿದರು.
ಎಲ್ಲ ದೇವಾಲಯಗಳಲ್ಲಿ ಭಕ್ತಾದಿಗಳು ನಗದು ಅಥವಾ ಬ್ಯಾಗ್, ಚೀಲವನ್ನು ಹೊತ್ತು ಬಂದಾಗ ಜನಸಂದಣಿಯಲ್ಲಿ ಜೇಬು ಕಳ್ಳತನದಂತಹ ಘಟನೆಗಳನ್ನು ಕಡಿಮೆ ಮಾಡಲು ಡಿಜಿಟಲ್ ಪಾವತಿ ವ್ಯವಸ್ಥೆಗೆ ಹೆಚ್ಚಿನ ಉತ್ತೇಜನ ನೀಡಲು ಕೀಲಿ ಅಳವಡಿಸಬೇಕು ಎಂದರು.
ಡಿಜಿಟಲ್ ದೇಣಿಗೆ ಮತ್ತು ನಗದು ರಹಿತ ಪಾವತಿ ಸುಗಮಗೊಳಿಸಲು, ಭಕ್ತರು ಮತ್ತು ಸಂದರ್ಶಕರು, ದೇಣಿಗೆ ನೀಡಲು, ಪುಸಾ ಸೇವಾ ಟಿಕೆಟ್‌ಗಳು ಮತ್ತು ಇತರ ದೇವಾಲಯ ಸೇವೆಗೆ ನಗದು ರಹಿತ ವಿಧಾನಗಳ ಮೂಲಕ ಖರೀದಿಸಲು ದೇವಾಲಯಗಳಲ್ಲಿ ಸುರಕ್ಷಿತ ಕಿಲಿ ಕೋಡ್ ಮತ್ತು ಇತರ ಡಿಜಿಟಲ್ ಪಾವತಿ ಸೌಲಭ್ಯಗಳನ್ನು ಒದಗಿಸಬೇಕು. ಸಂಬAಧಪಟ್ಟ ಬ್ಯಾಂಕ್‌ನ ವಿವರಗಳನ್ನು ಅಳವಡಿಸಬೇಕು ಎಂದು ಹೇಳಿದರು.
ದೇವಾಲಯಗಳಲ್ಲಿ ಪಾರದರ್ಶಕತೆ, ಬಳಕೆಯ ಸುಲಭತೆ, ಸರಿಯಾದ ಲೆಕ್ಕ ಪರಿಶೋಧನಾ ಹಾದಿ ಮತ್ತು ಸುಧಾರಿತ ಹಣಕಾಸು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ದೇವಾಲಯದ ಲೆಕ್ಕಪತ್ರ ವ್ಯವಸ್ಥೆಯೊಂದಿಗೆ ಸಂಯೋಜಿಸಲು ಡಿಸಿ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಲವೀಶ್ ಒರ್ಡಿಯಾ, ಹೆಚ್ಚುವರಿ ಪೊಲೀಸ್ ಅಽÃಕ್ಷಕ ಧರಣೇಶ, ಧರ್ಮದತ್ತಿ ಇಲಾಖೆ ಅಽಕಾರಿ ವಿಶ್ವನಾಥ, ಜಿಲ್ಲಾ ಮಟ್ಟದ ಅಽಕಾರಿಗಳಿದ್ದರು.

ಹುಂಡಿ ಎಣಿಕೆ ದಿನಾಂಕ ನಿಗದಿಪಡಿಸಿ

ಹುಂಡಿ ಎಣಿಕೆಯಲ್ಲಿ ಕಂದಾಯ ಅಽಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಹುಂಡಿ ಎಣಿಕೆ ದಿನಾಂಕ ಮುಂಚಿತವಾಗಿ ಕ್ಯಾಲೆಂಡರ್‌ನಲ್ಲಿ ದಿನ ನಿಗದಿಪಡಿಸಬೇಕು. ಹೆಚ್ಚು ದೇಣಿಗೆ, ಕಾಣಿಕೆ ಬರುವ ದೇವಾಲಯಗಳಲ್ಲಿ ವಾರಕ್ಕೆ ಒಂದು ದಿನ ಹಾಗೂ ಸಾಧಾರಣ ದೇಣಿಗೆ, ಕಾಣಿಕೆ ಬರುವ ದೇವಾಲಯಗಳಲ್ಲಿ ಎರಡು ವಾರಕ್ಕೆ ಒಂದು ದಿವಸ ಕಡ್ಡಾಯವಾಗಿ ಹುಂಡಿ ಎಣಿಕೆ ದಿನಾಂಕ ಮುಂಚಿತವಾಗಿ ಕ್ಯಾಲೆಂಡರ್‌ನಲ್ಲಿ ದಿನಗಳನ್ನು ನಿಗದಿಪಡಿಸುವಂತೆ ಸೂಚಿಸಿದರು. ಹುಂಡಿ ತೆರೆಯುವುದರಿಂದ, ಎಣಿಕೆ ಮಾಡಿ ಬ್ಯಾಂಕ್‌ಗೆ ಹಸ್ತಾಂತರಿಸುವವರೆಗೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣವನ್ನು ದಿನಾಂಕ ಮತ್ತು ಸಮಯ ದಾಖಲೆಯಾಗುವಂತೆ ಚಿತ್ರೀಕರಿಸಬೇಕು.

ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ

ಜಿಲ್ಲಾ ಮಟ್ಟದ ಸಮಿತಿಯನ್ನು ಜಿಲ್ಲಾಽಕಾರಿ ಅಧ್ಯಕ್ಷತೆಯಲ್ಲಿ ರಚಿಸಿ, ಸದರಿ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಽಕಾರಿ, ಪೊಲೀಸ್ ಆಯುಕ್ತರು, ಮುಜರಾಯಿ ಇಲಾಖೆ ಸ್ಥಳೀಯ ಅಽಕಾರಿಗಳು, ಮುಖ್ಯ ಅಗ್ನಿಶಾಮಕ ಅಽಕಾರಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪ್ರತಿನಿಽ ಮತ್ತು ಅಗತ್ಯವೆಂದು ಪರಿಗಣಿಸಬಹುದಾದ ಇತರೆ ಅಽಕಾರಿಗಳನ್ನು ಒಳಗೊಂಡAತೆ ಸಮಿತಿ ರಚಿಸಲಾಗಿದೆ. ಅನುಷ್ಠಾನದ ಹಂತ, ಗಮನಿಸಿದ ನ್ಯೂನತೆಗಳನ್ನು ಸರಿಪಡಿಸಲು ತೆಗೆದುಕೊಂಡ ಕ್ರಮಗಳು ಮತ್ತು ಕ್ರಿಯಾ ಯೋಜನೆ ಅಂಶಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಸಭೆಯಲ್ಲಿ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net