ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಉತ್ತರ ಕನ್ನಡ, ಉಡುಪಿ, ಬ್ರಹ್ಮಾವರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ವಿಜಯನಗರ, ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ಖಾಸಗಿ ವ್ಯಕ್ತಿಗಳು, ಸಂಸ್ಥೆಗಳ, ರೈಸ್ಮಿಲ್ ಹೆಸರು ಮತ್ತು ವಿಳಾಸ ಸಮೇತ ಸಿದ್ಧಪಡಿಸಿರುವ ಪಟ್ಟಿಯನ್ನು ಆಯುಕ್ತರಿಗೆ ಕಳುಹಿಸಿರುವ ಕಾರ್ಯದರ್ಶಿ, ಕೂಡಲೇ ಮೇಲಿನ ದಂಧೆಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ತಾಕೀತು ಮಾಡಿದ್ದಾರೆ.