ಪಾದಚಾರಿ ಮಾರ್ಗದಲ್ಲಿ ಯಾವುದೇ ನಾಮಫಲಕ, ಅಂಗಡಿ ಸರಕುಗಳನ್ನು ಇಡದೇ ವಾಹನಗಳು ಹಾಗೂ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಅಂಗಡಿ ಮಾಲೀಕರು, ವಾಹನ ಸವಾರರು ಸಹರಿಸಬೇಕು ಎಂದರು. ಅಂಗಡಿಯ ಮುಂದೆ ಫುಟ್‌ಪಾತ್‌ಗೆ ಹೊಂದಿಕೊಂಡಂತೆ ಹಾಕಿಕೊಂಡಿರುವ ಛಾವಣಿಗಳನ್ನು ಕೂಡಲೇ ತೆರವುಗೊಳಿಸಬೇಕು. ತೆರವು ಮಾಡದಿದ್ದರೇ ಮುಂದಿನ ದಿನಗಳಲ್ಲಿ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಗುವುದು ಎಂದು ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.