ನಗರಸಭೆ ಮತ್ತು ಸಿಬ್ಬಂದಿ ಪೊಲೀಸ್ ಭದ್ರತೆಯೊಂದಿಗೆ ತೆರಳಿ ಪಾದಚಾರಿ ಮಾರ್ಗಗಳ ಮೇಲೆ ಅನಧಿಕೃತವಾಗಿ ಅಳವಡಿಸಿದ ನಾಮಫಲಕಗಳು, ಮೆಟ್ಟಿಲುಗಳು, ಕೇಬಲ್ಗಳು, ಅಂಗಡಿಗಳ ಮೇಲ್ಭಾಗದಲ್ಲಿ ಅಳವಡಿಸಿರುವ ಶೀಟ್ಗಳು, ತಳ್ಳು ಗಾಡಿಗಳು, ಶಾಶ್ವತ ಪೆಟ್ಟಿಗೆಗಳು, ತಾತ್ಕಾಲಿಕ ಶೆಡ್ಗಳು, ಅನಧಿಕೃತ ಕಬ್ಬಿಣದ ರಚನೆಗಳು ಸೇರಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿರುವ ಎಲ್ಲ ರೀತಿಯ ಒತ್ತುವರಿ ತೆರವುಗೊಳಿಸಿದ್ದಾರೆ.