ತಲ್ಲೂರ: ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಗೆ ಬಿಇಒ ಎ.ಎ.ಖಾಜಿ ಗುರುವಾರ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಣದ ಜತೆಗೆ ಪೌಷ್ಟಿಕ ಆಹಾರ ಪೂರೈಸಬೇಕು. ಈಚೆಗೆ ಬಿಸಿಯೂಟ ನಿರ್ವಹಣೆ ಕೊರತೆಯಿಂದ ಕೆಲವೆಡೆ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಅಡುಗೆ ಕೋಣೆ ಹಾಗೂ ಅಡುಗೆ ಮಾಡುವ ಸ್ಥಳ ಸ್ವಚ್ಛವಾಗಿಡಬೇಕು. ಶುದ್ಧ ಕುಡಿಯುವ ನೀರು ಪೂರೈಸಬೇಕು. ಬಿಸಿಯೂಟ ವಿಷಯದಲ್ಲಿ ರ್ನಿಲಕ್ಷ$್ಯಮಾಡದೇ ಜಾಗರೂಕರಾಗಿರಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಸರ್ಕಾರಿ ಶಾಲೆಗಳಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಸರ್ಕಾರ ಕೋಟ್ಯಂತರ ರೂ. ವ್ಯಯಿಸುತ್ತಿದೆ. ಮಕ್ಕಳು ಸೌಲಭ್ಯ ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.