ಜಾಲಾಧಾರೆಪಾಳ್ಯದ ರಸ್ತೆ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಡ್ಡಿ!

Forest Department obstructs road development in Jaladharapalya!
Forest Department obstructs road development in Jaladharapalya!
Published on
ಹುಲಿಯೂರುದುರ್ಗ-: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರಿಂದ ಜಾಲಾಧಾರೆಪಾಳ್ಯಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ.
ಸ್ವಾತಂತ್ರ್ಯ ಪೂರ್ವದಿಂದಲೂ ಸಂಚರಿಸುತ್ತಿದ್ದ ರಸ್ತೆ ಅಭಿವೃದ್ಧಿ ಕಂಡಿರಲಿಲ್ಲ. ಕಾಡಂಚಿನ ಗ್ರಾಮಕ್ಕೆ ಇದ್ದ ಕಚ್ಚಾ ರಸ್ತೆ ಅಭಿವೃದ್ಧಿಗೆ ಇತ್ತೀಚೆಗೆ ಶಾಸಕರ ಅನುದಾನದಲ್ಲಿ ಹಣ ನೀಡಲಾಗಿದ್ದು, ಗುತ್ತಿಗೆದಾರ ಕೆಲಸ ಪ್ರಾರಂಭಿಸಲು ಮುಂದಾದಾಗ ಬುಧವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಕೆಲಸ ಮಾಡದಂತೆ ತಡೆವೊಡ್ಡಿ. ಜಾಲಾಧಾರೆಪಾಳ್ಯಕ್ಕೆ ಸಂಪರ್ಕಿಸುವ ರಸ್ತೆ ಅರಣ್ಯ ಪ್ರದೇಶದೊಳಗೆ 1 ಕಿ.ಮೀ. ಹಾದು ಹೋಗಿದೆ. ಹಾಗಾಗಿ ಅನುಮತಿ ಪಡೆದು ಕೆಲಸ ಪ್ರಾರಂಭಿಸುವಂತೆ ತಿಳಿಸಿದ್ದಾರೆ. ಈ ವೇಳೆ ಜಾಲಾಧಾರೆಪಾಳ್ಯ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಮೂರು ತಲೆಮಾರುಗಳಿಂದ ವಾಸಿಸುತ್ತಿರುವ ನಮಗೆ ಮೂಲ ಸೌಲಭ್ಯಗಳನ್ನು ನೀಡಿಲ್ಲ. ಇದುವರೆಗೆ ಗ್ರಾಮದ ರಸ್ತೆ ಡಾಂಬರ್​ ಕಂಡಿಲ್ಲ. ಸರಿಯಾದ ರಸ್ತೆ ಇಲ್ಲದ ಕಾರಣ ಗ್ರಾಮದಲ್ಲಿ ಇರುವ ಗಂಡು ಮಕ್ಕಳಿಗೆ ಹೆಣ್ಣು ನೀಡುತ್ತಿಲ್ಲ, ಗರ್ಭಿಣಿಯರು, ವೃದ್ಧರನ್ನು ಆಸ್ಪತ್ರೆಗೆ ಸಾಗಿಸುವುದೇ ದೊಡ್ಡ ಸಾಹಸವಾಗಿದೆ. ಹಲವು ವರ್ಷಗಳ ಬಳಿಕ ರಸ್ತೆ ಅಭಿವೃದ್ಧಿಗೆ ಶಾಸಕರು ಗಮನ ಹರಿಸಿದ್ದಾರೆ. ಸುಖಾಸುಮ್ಮನೆ ಅಡ್ಡಿಪಡಿಸಬೇಡಿ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು.
ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಅರಣ್ಯ ಇಲಾಖೆ ಅ್ಯಧಿಕಾರಿಗಳು ತಿಳಿಸಿದರು. ಈ ವೇಳೆ ಗ್ರಾಪಂ ಮಾಜಿ ಸದಸ್ಯ ಹನುಮಂತು, ಮುಖಂಡರಾದ ರುದ್ರೇಶ, ಹೊನ್ನಪ್ಪ, ಸುರೇಶ್​, ನಾಗರಾಜಯ್ಯ, ರವಿ, ವೆಂಕಟೇಶ್​ ಸೇರಿದಂತೆ ಜಾಲಾಧಾರೆಪಾಳ್ಯ ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net