ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್
ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ
  • ಹೃದಯಾಘಾತಕ್ಕೆ ಆರ್.ವಿ.ದೇವರಾಜ್(67) ನಿಧನ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆ ಅವರನ್ನು ತಕ್ಷಣವೇ ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ನೀಡಿದ ಬಳಿಕ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ (ಡಿ.02) ಅಂತಿಮ ಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ದೇವರಾಜ್ ಅವರು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜಪೇಟೆ ಶಾಸಕರಾಗಿದ್ದ ಅವರು ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಚಿಕ್ಕಪೇಟೆ ಕ್ಷೇತ್ರದಿಂದ ಆರಿಸಿ ಬಂದಿದ್ದರು‌.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net