ಇದೆಲ್ಲ ಒಂದು ಕಡೆಯಾದರೆ, ಹೈಕೋರ್ಟ್ ತೀರ್ಪು ಬರುವ ಮುನ್ನ ಅಂದರೆ, ಮೊನ್ನೆಯಷ್ಟೇ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿತು. ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲಕ್ಕೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಶಿವಶಂಕರಪ್ಪ ಅವರ ಫ್ಲಾಟ್ ಸೇರಿದಂತೆ ಪ್ರಮುಖರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದರು. ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ, ಬೆಳಗಾವಿ ಹಾಗೂ ಗುಜರಾತ್‌ನ ಅಹಮದಾಬಾದ್ ಸೇರಿ ಒಟ್ಟು 21 ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೆಗಾ ದಾಳಿ ನಡೆಸಿದರು.