ಮಾಜಿ ಸಚಿವ, ಹಿರಿಯ ರಾಜಕಾರಣಿ ಸಿ ವೀರಣ್ಣ ನಿಧನ

Former Minister C Veeranna Passes Away
Former Minister C Veeranna Passes Away
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಸಿ.ವೀರಣ್ಣ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನ.
  • 1983ರಲ್ಲಿ ಡೆಪ್ಯೂಟಿ ಸ್ಪೀಕರ್, 1984-89ವರೆಗೂ ಸಚಿವರಾಗಿದ್ದ ವೀರಣ್ಣ.
  • ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರು.
Former Minister C Veeranna Passes Away
ಸಿ.ವೀರಣ್ಣ ಅವರು ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳನ್ನು ಅಗಲಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದರು. ಕಳೆದ ತಿಂಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದರು. ಅಂತಿಮವಾಗಿ ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ಅವರು ನಿಧನರಾಗಿದ್ದಾರೆ.

ಸಿ ವೀರಣ್ಣರ ಸಾಧನೆಗಳು ಇವು...

1983ರಲ್ಲಿ ವಿಧಾನಸಭೆಯ ಉಪಾಧ್ಯಕ್ಷರಾಗಿ (ಡೆಪ್ಯೂಟಿ ಸ್ಪೀಕರ್) ಸಿ ವೀರಣ್ಣ ಸೇವೆ ಸಲ್ಲಿಸಿದರು. ಆ ನಂತರ 1984ರಿಂದ 1989ರವರೆಗೆ ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್. ಬೊಮ್ಮಾಯಿ ಅವರ ಮುಖ್ಯಮಂತ್ರಿತ್ವದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.


ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಹಾಗೂ ವಾಣಿಜ್ಯ, ಬಂಧಿಖಾನೆ ಸೇರಿದಂತೆ ಪ್ರಮುಖ ಹನ್ನೊಂದು ಇಲಾಖೆಗಳ ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿರ್ವಹಿಸಿದ್ದರು. ಪರಿಶಿಷ್ಟ ಪಂಗಡದ (ಎಸ್.ಟಿ) ಪಟ್ಟಿಯಲ್ಲಿ ವಾಲ್ಮೀಕಿ ಸಮುದಾಯದ ಪದವನ್ನು ಸೇರ್ಪಡೆಗೊಳಿಸುವಲ್ಲಿ ಅವರು ನಿರ್ಣಾಯಕ ಹಾಗೂ ಪ್ರಮುಖ ಪಾತ್ರ ವಹಿಸಿದ್ದರು, (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net