ಮಾಜಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನಾಚರಣೆ

ಮಾಜಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮ ದಿನಾಚರಣೆ ನಿಮಿತ್ತ ದಾವಣಗೆರೆಯಲ್ಲಿ ಆಯೋಜಿಸಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಭಿತ್ರಿಪತ್ರವನ್ನು ಹರಪನಹಳ್ಳಿಯಲ್ಲಿ ಬಿಡುಗಡೆಗೊಳಿಸಲಾಯಿತು. ದಾವಣಗೆರೆ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ, ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ, ಅರಸೀಕೆರೆ-ಬಿಳಿಚೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮತ್ತಹಳ್ಳಿ ಮಂಜುನಾಥ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜೂ.17 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ
ಹರಪನಹಳ್ಳಿ: ಮಾಜಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನಾಚರಣೆ ನಿಮಿತ್ತ ದಾವಣಗೆರೆಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ ತಿಳಿಸಿದರು.
ನಗರದಲ್ಲಿ ಸೋಮವಾರ ಕಾರ್ಯಕ್ರಮದ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಜೂ.16ರಂದು ಶಾಮನೂರು ಶಿವಶಂಕರಪ್ಪ ಅವರ ಜನ್ಮದಿನ ಆಚರಿಸಲಾಗುವುದು.
 ಜೂ. 17ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ವಿವಾಹಕ್ಕೆ ಹೆಸರು ನೋಂದಾಯಿಸಲು ಜೂ.12 ಕೊನೆಯ ದಿನವಾಗಿದೆ. ಆಸಕ್ತ ವಧು-ವರರು ಆಧಾರ್ ಕಾರ್ಡ್, ಶಾಲಾ ವರ್ಗಾವಣೆ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ವಿವಾಹ ಆಗದಿರುವ ಕುರಿತು ಗ್ರಾಪಂ ದೃಢೀಕರಣ ಪತ್ರ, ವಯಸ್ಸಿನ ಪುರಾವೆ, 2 ಫೋಟೋ ಸಹಿತ ಹೆಸರು ನೋಂದಾಯಿಸಬೇಕು. 
ವಧು, ವರರಿಗೆ ವಸತಿ, ಕುಟುಂಬ ಹಾಗೂ ಸಂಬಂಧಿಕರಿಗೆ ಉಚಿತ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಪ್ರಮುಖರಾದ ಟಿ.ವೆಂಕಟೇಶ್, ವಕೀಲ ಬಸವರಾಜ ಸಂಗಪ್ಪ, ಮೈದೂರು ಒ.ರಾಮಣ್ಣ, ಹುಲಿಕಟ್ಟಿ ಚಂದ್ರಪ್ಪ, ಎಲ್.ಮಂಜ್ಯಾನಾಯ್ಕ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net