85 ವರ್ಷದ ಚೆನ್ನಮ್ಮ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ, ಕಳೆದ ಎರಡು ದಿನದ ಹಿಂದೆ ಮಣಿಪಾಲ್ಗೆ ದಾಖಲಾಗಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.