ಸಂಚಾರ ವ್ಯತ್ಯಯ : ಸರಣಿ ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಸಂಚಾರ ಸಿಕ್ಕು ಉಂಟಾಗಿತ್ತು. ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಸಂಚಾರ ಪೊಲೀಸರು, ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಹರಸಾಹಸ ಪಟ್ಟರು. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.