ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ನಾಲ್ವರಿಗೆ ಗಾಯ

Four injured as car crashes into road divider
Four injured as car crashes into road divider
Published on
ಚಿಂತಾಮಣಿ: ಬೆಂಗಳೂರು ರಸ್ತೆಯ ಕೈವಾರ ಕ್ರಾಸ್​ ಬಳಿ ಶುಕ್ರವಾರ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಚಿರಂತ್​(40), ರಾಕೇಶ್​(41), ಸಾಫೀರ್​(31), ಸೋನಾಲಿ(31) ಗಾಯಗೊಂಡವರು. ನಗರದ ಹೊರವಲಯದ ಕೋಲಾರ ರಸ್ತೆಯಲ್ಲಿರುವ ರೇಷ್ಮೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಐಎಫ್​ಎಸ್​ ಅಧಿಕಾರಿ ವಿನೋದ್​ ಅವರೊಂದಿಗೆ ಹಮ್ಮಿಕೊಂಡಿದ್ದ ಸೆಮಿನಾರ್​ನಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಸೆಮಿನಾರ್​ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುವಾಗ ವಿನೋದ್​ಮತ್ತು ತಂಡ ಒಂದು ಕಾರಿನಲ್ಲಿ, ಈ ನಾಲ್ವರು ಮತ್ತೊಂದು ಕಾರಿನಲ್ಲಿ ಸಾಗುತ್ತಿದ್ದರು. ಕೈವಾರ ಕ್ರಾಸ್​ನಲ್ಲಿದ್ದ ಅಂಗಡಿಯವರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ರಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿದ ಕೈವಾರ ಹೊರಠಾಣೆ ಎಎಸ್​ಐ ಪ್ರಕಾಶ್​ ಮತ್ತು ಸಿಬ್ಬಂದಿ ಸ್ಥಳ ಪರಿಶೀಲಿಸಿದರು. ದೂರು ನೀಡದ ಕಾರಣ ಪ್ರಕರಣ ದಾಖಲಾಗಿಲ್ಲ ಎಂದು ಎಎಸ್​ಐ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net