ರಾಜ್ಯಸಭೆಗೆ ನಾಲ್ವರು ಅವಿರೋಧ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Published on
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಲ್ಲಿಸಲಾಗಿದ್ದ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಒಬ್ಬರ ನಾಮಪತ್ರ ಮಾನ್ಯಗೊಂಡಿವೆ. ನಾಲ್ಕು ಸ್ಥಾನಕ್ಕೆ ನಾಲ್ವರು ಮಾತ್ರ ಕಣದಲ್ಲಿ ಉಳಿದಿರುವುದರಿಂದ ಅವಿರೋಧ ಆಯ್ಕೆ ಎಂದು ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡುವುದು ಬಾಕಿ ಇದೆ.
ರಾಜ್ಯಸಭೆ ಪ್ರತಿಪಕ್ಷ ನಾಯಕನಾಗಿರುವ ಮಲ್ಲಿಕಾರ್ಜುನ ಖರ್ಗೆ ಮತ್ತೆ ಆಯ್ಕೆಯಾಗಿ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಇನ್ನು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರ ಆಯ್ಕೆಯೂ ಖಚಿತವಾಗಿದೆ. ಬಿಜೆಪಿಯಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವ ಪ್ರೊ.ಎಂ. ನಾಗರಾಜ್ ಆಯ್ಕೆ ಸಹ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net