ವಿಬಿಜಿರಾಮ್ ಜಿ ಹೆಸರಲ್ಲಿ ದೋಖಾ?

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ
Published on

ಬೆಂಗಳೂರು: ಯಂತ್ರದಲ್ಲಿ ಉಳಿಮೆ ಮಾಡಿರುವ ಕೃಷಿ ಭೂಮಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಫಲಾನುಭವಿಗಳನ್ನು ಕೂರಿಸಿ ಫೋಟೋ ತೆಗೆದು ವಂಚಿಸುತ್ತಿರುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಸಚಿವರ ಕಚೇರಿಯಿಂದ ಲಿಖಿತ ಸೂಚನೆ ನೀಡಿದ್ದಾರೆ. ಚಾಮರಾಜನಗರ ತಾಲೂಕು ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ಅಧಿಕಾರಿಗಳು ಉಳಿಮೆ ಮಾಡಿರುವ ಜಮೀನಿನಲ್ಲಿ ಮಹಿಳೆಯರು ಮತ್ತು ಪುರುಷರನ್ನು ಕೂರಿಸಿ ಫೋಟೋ ತೆಗೆದು, ಮಾನವ ದಿನ (ಪಿಡಿ) ಸೃಜನೆ ಮಾಡಿರುವ ದೂರು ಬಂದಿದೆ. 382 ರೂ. ಕೂಲಿ ಬದಲಿಗೆ 100 ರೂ. ಕೊಡಲಾಗುತ್ತಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದ ತಂಡದಿಂದ ತನಿಖೆ ನಡೆಸಿ, ಈ ರೀತಿ ಯೋಜನೆ ಉದ್ದೇಶವನ್ನೇ ಹಾಳು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಆಗಬೇಕು. ವಾಸ್ತವ ವರದಿಯನ್ನು 48 ಗಂಟೆಗಳ ಒಳಗಾಗಿ ಕಡತದಲ್ಲಿ ಮಂಡಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net