ಸರ್ಕಾರದ ಐತಿಹಾಸಿಕ ನಿರ್ಣಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ: ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ್

,
,
Published on
ಕಲಬುರಗಿ: ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಳೆದ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಸೌಲಭ್ಯವನ್ನು ಘೋಷಿಸಿರುವುದು ಐತಿಹಾಸಿಕ, ದೂರದೃಷ್ಟಿಯ ನಿರ್ಧಾರವಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಅರುಣಕುಮಾರ ಎಂ.ವೈ. ಪಾಟೀಲ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು 60 ಕಿ.ಮೀ. ವರೆಗೂ ಶಾಲಾ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಉಚಿತವಾಗಿ ಸಂಚರಿಸಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಕಲ್ಪಿಸಿರುವುದು ವಿಶೇಷವಾಗಿ ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಹತ್ತರ ವರದಾನವಾಗಲಿದೆ ಎಂದಿದ್ದಾರೆ. ದೂರದ ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಸಾವಿರಾರು ವಿದ್ಯಾರ್ಥಿಗಳಿಗೆ ಯೋಜನೆ ಹೊಸ ಭರವಸೆ ನೀಡಲಿದ್ದು, ಶಾಲಾ-ಕಾಲೇಜು ತೊರೆಯುವ ಪ್ರಮಾಣ ಕಡಿಮೆಯಾಗಲು ಮತ್ತು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪೆÇ್ರೀತ್ಸಾಹ ದೊರೆಯಲು ಸಹಕಾರಿಯಾಗಲಿದೆ ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಈ ಯೋಜನೆಯ ಅನುμÁ್ಠನದಿಂದ ವಾರ್ಷಿಕ ಸರಾಸರಿ 335.50 ಕೋಟಿ ರೂ.ಗಳನ್ನು ವೆಚ್ಚವಾಗುವ ಸಾಧ್ಯತೆ ಇದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿರುವುದು ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಬದ್ದತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಇದರಿಂದ ನಿಗಮದ ಆರ್ಥಿಕ ಸ್ಥಿರತೆಯನ್ನು ಕಾಪಾಡುವುದರ ಜತೆಗೆ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಸಮಾನವಾಗಿ ರಕ್ಷಿಸುವ ಕಾರ್ಯ ನಡೆದಿದೆ ಎಂದು ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಶಿಕ್ಷಣ, ಸಾಮಾಜಿಕ ಸಮಾನತೆ ಹಾಗೂ ಯುವಜನರ ಭವಿಷ್ಯ ನಿರ್ಮಾಣಕ್ಕೆ ಹೊಸ ದಿಕ್ಕು ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ್ ಅಭಿನಂದಿಸಿದ್ದಾರೆ. ಕಾರಣ, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಶಿಕ್ಷಣದ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net