ರೇಕುಳಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ನ್ನು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಉದ್ಘಾಟಿಸಿದರು. ಬಿಇಒ ಮದರಖಾನ್, ಮುಖ್ಯಶಿಕ್ಷಕಿ ಶೈಲಾಕುಮಾರಿ, ಗುರುನಾಥ ರಾಜಗೀರಾ, ಅಡ್ಡೆಪ್ಪ ತಾಳಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅಭಿಮತ
ರೇಕುಳಗಿಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಚಿಟಗುಪ್ಪ: ಸ್ವಾತಂತ್ರ್ಯ ನಮಗೆ ಸುಮ್ಮನೆ ದೊರೆತಿಲ್ಲ. ಲಕ್ಷಾಂತರ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ತಾಲೂಕಿನ ರೇಕುಳಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2024-&25ನೇ ಸಾಲಿನ ಮೈಕ್ರೊ ಯೋಜನೆಯಡಿ 40 ಲಕ್ಷ ರೂ.ವೆಚ್ಚದಲ್ಲಿ ಕೈಗೊಂಡ ಕೊಠಡಿಗಳ ನವೀಕರಣ ಕಾಮಗಾರಿ, ಗಣಕಯಂತ್ರ ಮತ್ತು ಆಂಗ್ಲ ಭಾಷಾ ಪ್ರಯೋಗಾಲಯದ ಪೀಠೋಪಕರಣ ಹಾಗೂ 2023-&24ನೇ ಸಾಲಿನಲ್ಲಿ ನಿರ್ಮಿಸಲಾದ ಹೆಚ್ಚುವರಿ ಕೊಠಡಿ ಉದ್ಘಾಟಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಶಿಕ್ಷಕರು ಹಾಗೂ ಪಾಲಕರು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರ ಕಲೆ ಹಾಗೂ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಬೇಕು. ಆರಂಭಿಕ ಹಂತದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ದೊರೆತರೆ ಮಕ್ಕಳು ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದ ಮಕ್ಕಳಿಗೂ ನಗರ ಪ್ರದೇಶದ ಮಕ್ಕಳಿಗೆ ದೊರೆಯುವಂತೆ ಹೈಟೆಕ್ ಶಿಕ್ಷಣದ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿದೆ. ಮಕ್ಕಳಿಗೆ ಗುರು ಮತ್ತು ಗುರಿ ಇರಬೇಕು. ಸ್ಮಾರ್ಟ್ ಕ್ಲಾಸ್ಗಳನ್ನು ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು, ಶಾಲೆಯಲ್ಲಿ ಶೌಚ ಗೃಹ ನಿಮಾರ್ಣ, ಅಡುಗೆ ಕೋಣೆ, ವಿಜ್ಞಾನ ಪ್ರಯೋಗಾಲಯ ಹಾಗೂ ಶಾಲಾ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮದರಖಾನ್, ಮುಖ್ಯಶಿಕ್ಷಕಿ ಶೈಲಾಕುಮಾರಿ, ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ, ಎಸ್ಡಿಎಂಸಿ ಅಧ್ಯಕ್ಷ ಅಡ್ಡೆಪ್ಪ ತಾಳಾ, ನಿಖಿಲ್ ಜೈನ್, ಯಶಪಾಲಸಿಂಗ್, ಅರ್ಜುನ, ಸೂರಜಸಿಂಗ್, ಜಗನ್ನಾಥ ಪಾಟೀಲ, ಶಿವಕುಮಾರ ಸ್ವಾಮಿ ಬಂಬಳಗಿ, ರಾಜಾರೆಡ್ಡಿ ಶಾಬಾದ, ಸುರೇಶ ಮಾಶೆಟ್ಟಿ, ಬಸವರಾಜ ಬೋರಾಳ, ಸಂತೋಫಿ ಹಳ್ಳಿಖೇಡ ರಾಜಕುಮಾರ ಪಂಚಾಳ ಇತರರಿದ್ದರು.
"
ಪಾಲಕರು ಮಕ್ಕಳನ್ನು ಮೊಬೈಲ್ ಬಳಕೆಯಿಂದ ಸಾಧ್ಯವಾದಷ್ಟು ದೂರವಿಡಬೇಕು. ಅಗತ್ಯವಿರುವಷ್ಟು ಮಾತ್ರ ಮೊಬೈಲ್ ನೀಡಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ.