ಇನ್ನು ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮಾಡಲು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದರು. ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಎಲಿವೇಟೆಡ್ ಕಾರಿಡಾರ್, 300 ಕಿ.ಮೀ ಬಫರ್ ರಸ್ತೆಗಳ ನಿರ್ಮಾಣ, ಮೆಟ್ರೋ 3ನೇ ಹಂತದ ಯೋಜನೆ ಡಿಪಿಆರ್, ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ಹೊರ ವಲಯಗಳಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ, ಪ್ರವಾಸಿಗರ ಆಕರ್ಷಣೆಗೆ ಸ್ಕೈ ಡೆಕ್ ನಿರ್ಮಾಣದಂತಹ ಯೋಜನೆಗಳನ್ನು ರೂಪಿಸಿದರು. ಇನ್ನು ಪಾಲಿಕೆ ಪರಿಣಾಮಕಾರಿ ಆಡಳಿತಕ್ಕೆ ಗ್ರೇಡರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದಾರೆ.