ಜಲಾಶಯದ ನೀರಿನ ಸಂಗ್ರಹ 43 ಟಿಎಂಸಿಗೆ ಇಳಿದರೆ, ಹೊಸ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಸುಲಭವಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಈಗ ನದಿಗೆ ನೀರು ಹರಿಸಲಾಗುತ್ತಿದೆ. ಇದಕ್ಕೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಅಧೀಕ್ಷಕ ಎಂಜನಿಯರ್ ಗಳ ಸಭೆಯಲ್ಲಿ ಸಮ್ಮತಿ ಪಡೆಯಲಾಗಿದೆ ಎಂದು ತುಂಗಭದ್ರಾ ಮಂಡಳಿ ಮೂಲಗಳು ತಿಳಿಸಿವೆ.