ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಧನಸಹಾಯ

ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯಿಂದ ಸಂಘ ಸಂಸ್ಥೆಗಳ ಧನಸಾಯಕ್ಕೆ ಅರ್ಜಿ ಆಹ್ವಾನ
ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯಿಂದ ಸಂಘ ಸಂಸ್ಥೆಗಳ ಧನಸಾಯಕ್ಕೆ ಅರ್ಜಿ ಆಹ್ವಾನ
Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನ
  • ಸಾಂಸ್ಕೃತಿಕ ವಾತಾವರಣ ರೂಪಿಸಲು ಕ್ರಮ
  • ಡಿ. 1 ರಿಂದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಸಾಂಸ್ಕೃತಿಕ ವಾತಾವರಣ ರೂಪಿಸಲು ಶ್ರಮಿಸುತ್ತಿರುವ ಸಂಘಸಂಸ್ಥೆಗಳಿಗೆ ಆರ್ಥಿಕ ನೆರವು ಒದಗಿಸುವ ಧನಸಹಾಯ ಯೋಜನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪುನರಾರಂಭಿಸಿದೆ.
2025-26ನೇ ಸಾಲಿಗೆ ಯೋಜನೆಯಡಿ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಡಿ.1ರಿಂದ 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅನುದಾನದ ಕೊರತೆಯಿಂದಾಗಿ ಇಲಾಖೆಯು ಈ ಯೋಜನೆಯಡಿ 2024-25ನೇ ಸಾಲಿನಲ್ಲಿ ಆರ್ಥಿಕ ನೆರವು ಒದಗಿಸಿರಲಿಲ್ಲ.
ಅರ್ಹ ಸಂಘಸಂಸ್ಥೆಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ನೇರವಾಗಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಧನಸಹಾಯಕ್ಕೆ ಸಂಬಂಧಿಸಿದ ಮಾರ್ಗಸೂಚಿ www.kannadasiri.karnataka.gov.inನಲ್ಲಿ ಲಭ್ಯ ಎಂದು ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net