ಬಾಲಕಾಮಿರ್ಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ಜೀವನದ ಹಕ್ಕುಗಳಿವೆ ಎಂಬ ಸಂದೇಶವನ್ನು ಈ ದಿನ ಸಾರುತ್ತದೆ. ಬಾಲಕಾಮಿರ್ಕ ಪದ್ಧತಿಗೆ ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆ ಹಾಗೂ ಸಾಮಾಜಿಕ ಅಸಮಾನತೆ ಪ್ರಮುಖ ಕಾರಣಗಳಾಗಿವೆ. ಅನೇಕ ಮಕ್ಕಳು ಕಾರ್ಖಾನೆಗಳು, ಹೋಟೆಲ್ಗಳು, ಅಂಗಡಿಗಳು ಹಾಗೂ ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದರಿಂದ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ತೊಂದರೆ ಆಗುತ್ತದೆ. ಜೊತೆಗೆ ಅವರ ಶಿಕ್ಷಣವೂ ಮಧ್ಯದಲ್ಲೇ ನಿಂತು ಹೋಗುತ್ತದೆ ಎಂದರು.