ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಡಾ. ಫ. ಗು. ಹಳಕಟ್ಟಿಯವರ ಜನ್ಮದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶರಣರು ತಾಳೆಗರಿ, ಓಲೆಗರಿಗಳಲ್ಲಿ ಬರೆದಿಟ್ಟಿದ್ದ ವಚನಗಳನ್ನು ಕಡುಬಡತನ ಮತ್ತು ಕಷ್ಟದ ಕಾಲದಲ್ಲೂ ಊರೂರು ಅಲೆದು ಸಂಗ್ರಹಿಸಿದ ಕೀತಿರ್ ಫ.ಗು. ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕಾಗಿ ಅವರನ್ನು ವಚನ ಪಿತಾಮಹ ಎಂದು ಗೌರವಿಸಲಾಗುತ್ತದೆ. ವಕೀಲಿ ವೃತ್ತಿಯನ್ನು ಬದಿಗಿಟ್ಟು, ಸೈಕಲ್ ಮೇಲೆ ಹಳ್ಳಿಹಳ್ಳಿಗಳಿಗೆ ಭೇಟಿ ನೀಡಿ ಸಾವಿರಾರು ವಚನಗಳನ್ನು ಅವರು ಸಂರಕ್ಷಿಸಿದರು. ವಚನಗಳ ಮುದ್ರಣಕ್ಕಾಗಿ ಸ್ವಂತ ಪ್ರಿಂಟಿಂಗ್ ಪ್ರೆಸ್ ಸ್ಥಾಪಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.