ಸೋಮಾವರ ಬೆಳಗ್ಗೆಯೇ ಏಳಕ್ಕೂ ಹೆಚ್ಚು ವಾಹನಗಳಲ್ಲಿ ನಗರಸಭೆ ಕಚೇರಿಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ವಿಭಾಗಗಳಿಗೆ ತೆರಳಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ಆರಂಭಿಸಿದರು. ಬೀದಿದೀಪ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ಟ್ಯಾಂಕರ್ ಮೂಲಕ ನೀರು ವಿತರಣೆ, ಲೋಕೋಪಯೋಗಿ ಇಲಾಖೆ, ತೆರಿಗೆ ವಿಭಾಗ ಸೇರಿದಂತೆ ಒಟ್ಟು ಎಂಟು ಪ್ರಮುಖ ವಿಭಾಗಗಳ ಕಡತಗಳನ್ನು ಪರಿಶೀಲಿಸಲಾಯಿತು. ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ವಿವಿಧ ಅಜಿರ್ಗಳ ಪ್ರಗತಿ ಹಾಗೂ ವಿಲೇವಾರಿ ಕುರಿತ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸಿದರು.