ಆ.15 ರಂದು ಶನಿವಾರ ಸಂಜೆ 5 ಗಂಟೆಗೆ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಲಿದೆ. ಆ. 16 ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ. ಸಂಜೆ 4.30 ಗಂಟೆಗೆ 2026ನೇ ಸಾಲಿನ ಜೀವಮಾನ ಸಾಧನೆ, ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ, ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭವು ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರ ಬಸವೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಜರಗುವುದು. ವಿಧಾನಸಭೆಯ ಸಭಾಪತಿ ಜಿ.ಎಸ್.ಪಾಟೀಲ, ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ಬಸವರಾಜ ರಾಯರೆಡ್ಡಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಎಚ್.ಕೆ.ಪಾಟೀಲ, ಸಿ.ಸಿ.ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಉಪಸ್ಥಿತಿ ಇರುವರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯ ಆನಂದ ಪೋತ್ನಿಸ್ ಮತ್ತು ಈಶಣ್ಣ ಮುನವಳ್ಳಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ, ಶ್ರೇಷ್ಠ ಉದ್ಯಮಿ ಪ್ರಶಸ್ತಿಯನ್ನು ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಶ್ರೇಷ್ಠ ವರ್ತಕ ಪ್ರಶಸ್ತಿ, ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಲಾಗುವುದು ಎಂದರು.