ಶಿಕ್ಷಕರ ಶ್ರಮಕ್ಕೆ ಗೌರವ, ಶೈಕ್ಷಣಿಕ ಗುಣಮಟ್ಟಕ್ಕೆ ಆದ್ಯತೆ: ಎಸ್​. ವಿ. ಸಂಕನೂರ

ಗದಗ ನಗರದ ಅಂಬೇಡ್ಕರ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್​.ವಿ. ಸಂಕನೂರು, ಸಿದ್ದು ಪಾಟೀಲ, ಬಸವರಾಜ ಬಳ್ಳಾರಿ, ಕೆ. ಡಿ. ಬಡಿಗೇರ, ಎಂ.ಎಂ. ಮೇಗಲಮನಿ ಹಲವರು ಇದ್ದರು.
ಗದಗ ನಗರದ ಅಂಬೇಡ್ಕರ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್​.ವಿ. ಸಂಕನೂರು, ಸಿದ್ದು ಪಾಟೀಲ, ಬಸವರಾಜ ಬಳ್ಳಾರಿ, ಕೆ. ಡಿ. ಬಡಿಗೇರ, ಎಂ.ಎಂ. ಮೇಗಲಮನಿ ಹಲವರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ವಿದ್ಯಾಥಿರ್ಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಬೋಧನಾ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ವಿಧಾನ ಪರಿಷತ್​ ಶಾಸಕ ಎಸ್​.ವಿ. ಸಂಕನೂರ ಹೇಳಿದರು.
ನಗರದ ಡಾ . ಬಿ . ಆರ್​.ಅಂಬೇಡ್ಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಡಾ . ಸರ್ವಪಲ್ಲಿ ರಾಧಾಕೃಷ್ಣನ್​ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಫಲಿತಾಂಶ ಶೇ.93ರಷ್ಟಿದೆ. ಗದಗ ಜಿಲ್ಲೆ ಶೇ.94ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದ ಸರಾಸರಿಯನ್ನು ಮೀರಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾಥಿರ್ಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪರಿಶ್ರಮ ಕಾರಣವಾಗಿದೆ. ವಿದ್ಯಾಥಿರ್ಗಳ ಕಲಿಕೆಗೆ ಪೂರಕವಾಗಿ ಶಾಲಾ ಸಮಯಕ್ಕೂ ಮುನ್ನ ಹಾಗೂ ನಂತರ ಪರಿಹಾರ ಬೋಧನೆ, ಪರೀಕ್ಷಾ ಸಂದರ್ಭದಲ್ಲಿ ಓದಿನ ಮನೆ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾಥಿರ್ಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶ್ರಮಿಸಿದ ಶಿಕ್ಷಕರ ಸೇವೆ ಶ್ಲಾಗನೀಯ ಎಂದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್​ ಅವರ ಜೀವನ, ಜ್ಞಾನ ಮತ್ತು ಶೈಕ್ಷಣಿಕ ಸೇವೆ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆ ಆಗಿದೆ. ಉಪನ್ಯಾಸಕರಾಗಿ ಸೇವೆ ಆರಂಭಿಸಿ, ವಿಶ್ವವಿದ್ಯಾಲಯದ ಕುಲಪತಿ, ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಅವರ ಜ್ಞಾನ, ಸರಳತೆ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಶಿಕ್ಷಕರು ತಮ್ಮ ವೃತ್ತೀಜಿವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಕನೂರ ಹೇಳಿದರು.
ಶಿಕ್ಷಕ ವೃತ್ತಿಯು ಸಮಾಜ ನಿರ್ಮಾಣದ ಪ್ರಮುಖ ಕೊಂಡಿಯಾಗಿದೆ. ಶಿಕ್ಷಕರ ಗೌರವ ಮತ್ತು ನತೆಯನ್ನು ಎತ್ತಿಹಿಡಿಯುವುದರ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ನಿಮಿರ್ಸಲು ಸಾಧ್ಯ. ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾಥಿರ್ಗಳಲ್ಲಿ ಉತ್ತಮ ಮೌಲ್ಯಗಳು, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವ ಕಾರ್ಯದಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿದ್ಯಾಥಿರ್ಗಳಿಗೆ ಕನ್ನಡದ ಜೊತೆಗೆ ಇಂಗ್ಲಿಷ್​ ಭಾಷೆಯಲ್ಲಿಯೂ ಉತ್ತಮ ಕಲಿಕಾ ಅವಕಾಶ ಕಲ್ಪಿಸುವ ಉದ್ದೇಶದಿಂದ ದ್ವಿಭಾಷಾ ಬೋಧನಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಿಕ್ಷಕರಿಗೆ ಸಮಗ್ರ ತರಬೇತಿ ನೀಡುವುದು ಅಗತ್ಯವಿದೆ. ಕನಿಷ್ಠ ಆರು ತಿಂಗಳಿಂದ ಒಂದು ವರ್ಷದವರೆಗೆ ಹಂತ ಹಂತವಾಗಿ ತರಬೇತಿ ನೀಡಿದರೆ, ಶಿಕ್ಷಕರು ಹೆಚ್ಚಿನ ಆತ್ಮವಿಶ್ವಾಸದಿಂದ ದ್ವಿಭಾಷಾ ಬೋಧನೆ ನಡೆಸಲು ಅನುಕೂಲವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ನಡೆಯುವ ಆನ್​ಲೈನ್​ ಹಾಗೂ ಡಿಜಿಟಲ್​ ಕಾರ್ಯಗಳನ್ನು ಸುಗಮಗೊಳಿಸಲು ಅಗತ್ಯ ಸಹಾಯಕ ಸಿಬ್ಬಂದಿಯನ್ನು ಒದಗಿಸುವ ಕುರಿತು ಸರ್ಕಾರ ಗಮನ ಹರಿಸಬೇಕು ಎಂದು ಸಂಕನೂರ ಹೇಳಿದರು.
ಶಾಲೆಗಳಲ್ಲಿ ಕಂಪ್ಯೂಟರ್​ ಅಥವಾ ಡೇಟಾ ಎಂಟ್ರಿ ಆಪರೇಟರ್​ಗಳನ್ನು ಒದಗಿಸುವುದರಿಂದ ಡಿಜಿಟಲ್​ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುವುದರ ಜೊತೆಗೆ, ಶಿಕ್ಷಕರು ವಿದ್ಯಾಥಿರ್ಗಳ ಬೋಧನೆ, ಮಾರ್ಗದರ್ಶನ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಶಿಕ್ಷಕರನ್ನು ಗೌರವಿಸಲಾಯಿತು. ನಿವೃತ್ತ ಶಿಕ್ಷಕರಿಗೂ ಸನ್ಮಾನ ನೆರವೇರಿಸಲಾಯಿತು.
ಮಾಜಿ ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಶಾಲ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್​.ಎಸ್​. ಬುರಡಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net