ನಗರದ ಗಂಗಾಪುರ ಪೇಟೆಯ ದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೋಜಿಸಿದ್ದ ಹಿಂದೂ ರಾಷ್ಟ್ರ ಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಹಿಂದೂ ಧರ್ಮಶಿಕ್ಷಣವನ್ನು ಪಡೆದು, ಧರ್ಮಾಚರಣೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಆಧ್ಯಾತ್ಮಿಕ ಬಲವನ್ನು ವೃದ್ಧಿಸಿಕೊಂಡಾಗ ಮಾತ್ರ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಸಾಧ್ಯ. ಹಿಂದೂ ಧರ್ಮವು ಸಮಗ್ರ ಜೀವನ ಪದ್ಧತಿಯಾಗಿದ್ದು, ಧರ್ಮಶಿಕ್ಷಣ ನೀಡುವುದು ಇಂದಿನ ಕಾಲದ ಅಗತ್ಯವಾಗಿದೆ. ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಅಭಾವದ ಕಾರಣದಿಂದ ಇಂದಿನ ಪೀಳಿಗೆಯಲ್ಲಿ ಧರ್ಮಾಭಿಮಾನ ಮತ್ತು ರಾಷ್ಟ್ರಾಭಿಮಾನ ನಶಿಸಿ ಹೋಗುತ್ತಿದೆ. ಜೊತೆಗೆ ಹಿಂದೂ ದೇವಸ್ಥಾನಗಳ ಸರಕಾರೀಕರಣ, ದೇಶದಲ್ಲಿ ವಕ್ಫ ಕಾನೂನಿನ ರ್ದುಬಳಕೆ, ಲವ್ ಜಿಹಾದ್, ಹಲಾಲ್ ಜಿಹಾದ್, ಬಲವಂತದ ಮತಾಂತರದ ಮೂಲಕ ಹಿಂದೂ ಸಮಾಜದ ಮೇಲೆ ಆಘಾತಗಳು ಹೆಚ್ಚುತ್ತಿವೆ. ಹಿಂದೂ ದೇವಸ್ಥಾನಗಳ ರಕ್ಷಣೆ, ಧಾಮಿರ್ಕ ಸ್ವಾತಂತ್ರ್ಯ, ಸಾಂಸತಿಕ ಮೌಲ್ಯಗಳ ಸಂರಕ್ಷಣೆಗಾಗಿ ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸುವುದಕ್ಕಾಗಿ ನಾವೆಲ್ಲರೂ ಧರ್ಮಾಚರಣೆಯನ್ನು ಮಾಡಿ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.