ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎ.ಸಿ ನ್ಯಾಯಾಲಯಗಳಲ್ಲಿ 73,624 ಅವಧಿ ಮೀರಿದ ಪ್ರಕರಣಗಳಿದ್ದವು. ಈಗ ಅವು 11,605 ಕ್ಕೆ ಇಳಿದಿವೆ. ಐದು ವರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಇದ್ದ 32,782 ಪ್ರಕರಣಗಳಲ್ಲಿ ಕೇವಲ 3,155 ಮಾತ್ರ ಉಳಿದಿದ್ದು, ಮುಂದಿನ ಎರಡು ತಿಂಗಳಲ್ಲಿ ಇವುಗಳನ್ನು ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.