ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಸಂದರ್ಭದಲ್ಲಿ ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಲ್ಲಾ ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದ್ದು, ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು.