ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಗದಗ
ಗದಗ
Published on
ವಿಜಯವಾಣಿ ಸುದ್ದಿಜಾಲ ಗದಗ
ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಜಿಲ್ಲಾ ಬಿಜೆಪಿ ಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಐ ವಿಧೇಯಕವು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ನಾಗರೀಕರ ಮೂಲಬೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್​ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂನೆ ಆಗಿದೆ. ಡಾ. ಬಿ. ಆರ್​. ಅಂಬೇಡ್ಕರ್​ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗೆ ್ರಸ್​ ಸರಕಾರ ಕಿತ್ತುಕೊಳ್ಳುತ್ತಿದೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ ಎಂದರು.
ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಆರೋಪಿದರು.
ಮಾಜಿ ಜಿಲ್ಲಾಧ್ಯ ಎಂ. ಎಸ್​. ಕರೀಗೌಡ್ರ ಮಾತನಾಡಿ, ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲದೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ ಎಂಬ ಪ್ರಶ್ನೆ ಮೂಡಿದೆ ಎಂದರು.
ಜಿಲ್ಲಾ ಪ್ರಧಾನಕಾರ್ಯದಶಿರ್ ಲಿಂಗರಾಜ ಪಾಟೀಲ ಮಾತನಾಡಿ ಈ ವಿಧೆಯಕದರಡಿ ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದರು.
ಗದಗ ನಗರ ಮಂಡಲ ಅಧ್ಯ ಸುರೇಶ ಮರಳಪ್ಪನವರ, ಗ್ರಾಮೀಣ ಮಂಡಲ ಅಧ್ಯ ಬೂದಪ್ಪ ಹಳ್ಳಿ, ಜಿಲ್ಲಾ ವಕ್ತಾರ ಎಂ. ಎಂ. ಹಿರೇಮಠ, ಬಿ.ಎಸ್​.ಚಿಂಚಲಿ, ಸಿದ್ದು ಪಲ್ಲೇದ, ವಿಜಯಕುಮಾರ ಗಡ್ಡಿ, ಅನೀಲ ಅಬ್ಬಿಗೇರಿ, ಅಶೋಕ ಕುಡತಿನಿ ದಶರಥರಾಜ ಕೊಳ್ಳಿ, ಚಂದ್ರು ತಡಸದ, ಶಿವು ಹಿರೇಮನಿಪಾಟೀಲ, ಅಮರನಾಥ ಗಡಗಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net