ನೀರು, ಬೀಜ-ಗೊಬ್ಬರ ಸಮರ್ಪಕವಾಗಿ ಪೂರೈಕೆ ಮಾಡಿ: ಬಸವರಾಜ ಬೊಮ್ಮಾಯಿ

  ಗದಗ ಜಿಪಂ ಸಭಾಂಗಣದಲ್ಲಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯಿತು. ಸಿ. ಎನ್​. ಶ್ರೀಧರ, ಎಸ್ಪಿ ರೋಹನ  ಜಗದೀಶ,  ಸಂತೋಷ ಕುಮಾರ, ಡಾ. ದುರಗೇಶ ಕೆ ಆರ್​, ಸಿ. ಆರ್​. ಮುಂಡರಗಿ ಸೇರಿದಂತೆ ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಗದಗ ಜಿಪಂ ಸಭಾಂಗಣದಲ್ಲಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯಿತು. ಸಿ. ಎನ್​. ಶ್ರೀಧರ, ಎಸ್ಪಿ ರೋಹನ ಜಗದೀಶ, ಸಂತೋಷ ಕುಮಾರ, ಡಾ. ದುರಗೇಶ ಕೆ ಆರ್​, ಸಿ. ಆರ್​. ಮುಂಡರಗಿ ಸೇರಿದಂತೆ ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
Published on
ಜನರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆ ನೀಡಿ.
ವಿಜಯವಾಣಿ ಸುದ್ದಿಜಾಲ ಗದಗ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಅಧಿಕಾರಿಗಳು ಸ್ಪಷ್ಟ ಗುರಿ, ಬದ್ಧತೆ ಹಾಗೂ ಮಾನವೀಯ ದೃಷ್ಟಿಕೋನದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಪುರಸತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮುಖವಾಗಿ ಆಡಳಿತ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ಹೆಚ್ಚು ಹೊಣೆಗಾರಿಕೆ ಪ್ರದಶಿರ್ಸಬೇಕು ಎಂದರು.
ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಯುದ್ಧ ಸೇರಿದಂತೆ ಹಲವು ಬೆಳವಣಿಗೆಗಳು ದೇಶದ ಆಥಿರ್ಕತೆ ಮತ್ತು ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇಂತಹ ಸಂದರ್ಭಗಳಲ್ಲಿ ಜನರಿಗೆ ಸರ್ಕಾರ ತಮ್ಮೊಂದಿಗಿದೆ ಎಂಬ ಭರವಸೆ ಮೂಡಿಸುವ ಕೆಲಸವನ್ನು ಆಡಳಿತ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳಲ್ಲಿ ಧನಾತ್ಮಕ ಚಿಂತನೆ ಮತ್ತು ಸೇವಾ ಮನೋಭಾವ ಇರಬೇಕು. ಆಳ್ವಿಕೆ ಮಾಡುವವರು ಆಡಳಿತ ಮಾಡಲು ಹೊರಟಿದ್ದಾರೆ, ಆಡಳಿತ ಮಾಡುವವರು ಆಳ್ವಿಕೆ ಮಾಡಲು ಹೊರಟಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.
ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಸ್ತಾಪಿಸಿದ ಬೊಮ್ಮಾಯಿ ಅವರು, ಮುಖ್ಯ ನೀರು ಸರಬರಾಜು ಪೈಪಲೈನ್​ಗಳಿಗೆ ಅಳವಡಿಸಲಾಗಿರುವ ಅಕ್ರಮ ಸಂಪರ್ಕಗಳನ್ನು ತೆರವುಗೊಳಿಸುವಂತೆ ಹಿಂದಿನ ಸಭೆಯಲ್ಲಿಯೇ ಸೂಚನೆ ನೀಡಲಾಗಿತ್ತು. ಆದರೆ ಇದುವರೆಗೆ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ$್ಯವನ್ನು ತೋರಿಸುತ್ತದೆ ಎಂದು ಬೊಮ್ಮಾಯಿ ಹೇಳಿದರು.
ಅಧಿಕಾರಿಗಳಲ್ಲಿ ಜನರಿಗೆ ನೀರು ಪೂರೈಸುವ ಬದ್ಧತೆ ಇರಬೇಕು. ಹಾವೇರಿ ಜಿಲ್ಲೆಯಲ್ಲಿಯೂ ಇದೇ ರೀತಿಯ ಸಮಸ್ಯೆ ಇತ್ತು. ಆದರೆ ಸಮರ್ಪಕ ಕ್ರಮಗಳಿಂದ ವಾರಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಅದೇ ರೀತಿಯ ವ್ಯವಸ್ಥೆಯನ್ನು ಗದಗದಲ್ಲಿಯೂ ಜಾರಿಗೆ ತರಬೇಕು. ಅವಳಿ ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನೀರು ಪೂರೈಕೆಯಲ್ಲಿ ಉಂಟಾಗುತ್ತಿರುವ ವ್ಯತ್ಯಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಸಹನೆಯನ್ನು ಪರೀಕ್ಷಿಸಬೇಡಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಮೃತ್​ 2.0 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಕೇಂದ್ರ ಸರ್ಕಾರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯೋಜನೆಗಳ ಅನುಷ್ಠಾನಕ್ಕೆ ಕೇವಲ ಅನುದಾನ ಇದ್ದರಷ್ಟೆ ಸಾಕಾಗುವುದಿಲ್ಲ. ಕೆಲಸ ಮಾಡುವ ಮನಸ್ಸು ಹಾಗೂ ಸಮಾಜದ ಬಗ್ಗೆ ಕಾಳಜಿ ಇರಬೇಕು. ಶಿಕ್ಷಣ, ಆರೋಗ್ಯ, ವಸತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಲಾಭ ಜಿಲ್ಲೆಯ ಬಡವರು, ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನ ಬಳಕೆ ಆಗುತ್ತಿದ್ದರೂ ಸಾರ್ವಜನಿಕರು ಸರ್ಕಾರಿ ಕಚೇರಿಗಳು ಮತ್ತು ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರಿದಿರುವುದು ವಿಷಾದನೀಯ. ಜನರ ಕೆಲಸಗಳು ತ್ವರಿತವಾಗಿ ಆಗುವಂತೆ ಆಡಳಿತ ವ್ಯವಸ್ಥೆ ರೂಪುಗೊಳ್ಳಬೇಕು ಎಂದರು.
ಡಿಎಪಿ ಹಾಗೂ ಯೂರಿಯಾ ಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಬರಬಹುದಾದ್ದರಿಂದ ಸರಬರಾಜು ವ್ಯವಸ್ಥೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಬೇಡಿಕೆಗೆ ಅನುಗುಣವಾಗಿ ಸಹಕಾರ ಸಂಗಳಿಗೆ ಗೊಬ್ಬರ ಹಂಚಿಕೆ ಮಾಡಬೇಕು. ಡೀಲರ್​ಗಳು ಅನಗತ್ಯವಾಗಿ ಗೊಬ್ಬರ ದಾಸ್ತಾನು ಮಾಡಿ ಕಾಳಸಂತೆ ಸೃಷ್ಟಿಸದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದರು.
ಬಾಕ್ಸ್​:
ಸಭೆಯಲ್ಲಿ ಶಾಸಕ ಸಿ. ಸಿ. ಪಾಟೀಲ ಹಾಗೂ ಶಾಸಕ ಎಸ್​.ವಿ. ಸಂಕನೂರ ಅವರು ಗದಗ- ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸುದೀರ್ ಚರ್ಚೆ ನಡೆಸಿ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿದರು. ಶಾಸಕ ಡಾ. ಚಂದ್ರು ಲಮಾಣಿ ಅವರು ಲೆ$್ಮಶ್ವರ, ಮುಂಡರಗಿ ಹಾಗೂ ಶಿರಹಟ್ಟಿ ಭಾಗಗಳ ನಗರ ಮತ್ತು ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಯನ್ನು ಸಭೆಯ ಗಮನಕ್ಕೆ ತಂದು ಶ್ರೀ ಪರಿಹಾರಕ್ಕೆ ಆಗ್ರಹಿಸಿದರು.
ಬಾಕ್ಸ್​:
* ಸಭೆಯಲ್ಲಿ ತೋಟಗಾರಿಕೆ, ಕೈಗಾರಿಕೆ, ಆರೋಗ್ಯ, ಪಶು ಸಂಗೋಪನೆ, ಹೆಸ್ಕಾಂ, ವಿಕಲಚೇತನರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
* ಮೆ. 31, 2026ರ ಅಂತ್ಯದ ಮಾಹಿತಿಯಂತೆ ವೃದ್ಧಾಪ್ಯ ವೇತನ ಯೋಜನೆಯಡಿ 51,011, ವಿಧವಾ ವೇತನ ಯೋಜನೆಯಡಿ 40,572 ಹಾಗೂ ಅಂಗವಿಕಲ ವೇತನ ಯೋಜನೆಯಡಿ 25,370 ಫಲಾನುಭವಿಗಳು ಪಿಂಚಣಿ ಪಡೆಯುತ್ತಿದ್ದಾರೆ. ಪಿಂಚಣಿ ಯೋಜನೆಗಳಡಿ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ (60 ರಿಂದ 64 ವರ್ಷದವರೆಗೆ ) ಯೋಜನೆಯ 12,835 ಫಲಾನುಭವಿಗಳಿಗೆ ತಿಂಗಳಿಗೆ ?600, ಇಂದಿರಾ ಗಾಂಧಿ ರಾಷ್ಟ್ರೀಯ ವಿಧವಾ ವೇತನ ಯೋಜನೆಯ 37,874 ಫಲಾನುಭವಿಗಳಿಗೆ 1,200 ಹಾಗೂ ಇಂದಿರಾ ಗಾಂಧಿ ರಾಷ್ಟ್ರೀ ಅಂಗವಿಕಲ ವೇತನ 302 ಫಲಾನುಭವಿಗಳಿಗೆ 1,200 ನೀಡಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ, ಎಸ್ಪಿ ರೋಹನ ಜಗದೀಶ, ಡಿಸಿಎಫ್​ ಸಂತೋಷ ಕುಮಾರ, ಎಡಿಸಿ ಡಾ. ದುರಗೇಶ ಕೆ ಆರ್​, ಸಿ. ಆರ್​. ಮುಂಡರಗಿ ಸೇರಿದಂತೆ ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net