ವಿಶ್ವದ 4ನೇ ಬಲಿಷ್ಠ ರಾಷ್ಟ್ರವನ್ನಾಗಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ: ಬೊಮ್ಮಾಯಿ

ಗದಗ ವೀರನಾರಾಯಣ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅತೀ ಹೆಚ್ಚು ಅವಧಿ ನರೇಂದ್ರ ಮೋದಿ ಪ್ರಧಾನಿ ಆದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಎಸ್​.ವಿ. ಸಂಕನೂರು, ರಾಜು ಕುರಡಗಿ, ಲಿಂಗರಾಜ ಪಾಟೀಲ ಹಲವರು ಇದ್ದರು.
ಗದಗ ವೀರನಾರಾಯಣ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅತೀ ಹೆಚ್ಚು ಅವಧಿ ನರೇಂದ್ರ ಮೋದಿ ಪ್ರಧಾನಿ ಆದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಎಸ್​.ವಿ. ಸಂಕನೂರು, ರಾಜು ಕುರಡಗಿ, ಲಿಂಗರಾಜ ಪಾಟೀಲ ಹಲವರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡು 4,399 ದಿನಗಳನ್ನು ಪೂರೈಸಿದ ಹಿನ್ನೆಲೆ ಜಿಲ್ಲಾ ಭಾರತೀಯ ಜನತಾ ಪಾಟಿರ್ಯ ಹಿರಿಯರು, ಕಾರ್ಯಕರ್ತರು ನಗರದ ವೀರ ನಾರಾಯಣ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿದರು.
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, 1947 ರಲ್ಲಿ ಸ್ವಾತಂತ್ರ್ಯ ಸಿಕ್ಕ ನಂತರ ರಾಷ್ಟ್ರೀಯ ಸರ್ಕಾರ ಅಧಿಕಾರಕ್ಕೆ ಬಂದಿತ್ತು. 1952ರಲ್ಲಿ ನಡೆದ ಮೊದಲನೇಯ ಸಾರ್ವತ್ರಿಕ ಚುನಾವಣೆಯಲ್ಲಿ ಜವಹರಲಾಲ ನೆಹರು ಅವರು 3 ಬಾರಿ ಆಯ್ಕೆಯಾಗಿ 4,398 ದಿನಗಳವರೆಗೆ ಅಧಿಕಾರವನ್ನು ನಡೆಸಿದ್ದರು. ಅದೇ ಇದೂವರೆಗಿನ ದಾಖಲೆಯಾಗಿತ್ತು. ಆ ದಾಖಲೆಯನ್ನು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಮುರಿದಿದ್ದಾರೆ. ಈ ದೇಶದ ಅತೀ ಹೆಚ್ಚು ದಿನಗಳ ವರೆಗೆ ಪ್ರಧಾನಮಂತ್ರಿಯಾಗಿ ಸೇವೆಯನ್ನು ಸಲ್ಲಿಸಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಪ್ರತಿ ದಿನ 18 ಗಂಟೆ ಕೆಲಸ ಮಾಡಿ ಭಾರತವನ್ನು ಜಗತ್ತಿನ 4ನೇ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿದ ಕೀತಿರ್ ಮೋದಿಯವರಿಗೆ ಸಲ್ಲುತ್ತದೆ. ಮೋದಿಯವರ ಆಡಳಿತದಿಂದ ಇಂದು ಭಾರತ ಜಗತ್ತಿನಲ್ಲಿಯೇ ವಿಶ್ವಗುರುವಾಗಿ ಹೊರಹೊಮ್ಮಿದೆ ಎಂದರು.
ಶಾಸಕ ಸಿ. ಸಿ. ಪಾಟೀಲ ಮಾತನಾಡಿ ಕಳೆದ 12 ವರ್ಷದಿಂದ ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಕೇಂದ್ರ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡಿದ್ದಾರೆ. ನೂರಾರು ಯೋಜನೆಗಳನ್ನು ಜಾರಿಗೆ ತಂದು ಮಹಿಳೆಯರು, ರೈತರು, ಯುವ ಜನತೆಗಾಗಿ, ಕಾಮಿರ್ಕರಿಗಾಗಿ ಎಲ್ಲ ರೀತಿಯ ಜನರಿಗೂ ಮೋದಿಯವರ ಅಭಿವೃದ್ಧಿ ಕಾರ್ಯಗಳು ತಲುಪಿವೆ ಎಂದರು.
ವಿಧಾನ ಪರಿಷತ್​ ಸದಸ್ಯ ಎಸ್​. ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯ ರಾಜು ಕುರುಡಗಿ ಮಾತನಾಡಿದರು. ಇದಕ್ಕೂ ಮೊದಲು ವೀರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಂತರ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಎಂ. ಎಸ್​. ಕರೀಗೌಡ್ರ, ಮೋಹನ ಮಾಳಶೆಟ್ಟಿ, ಜಿಲ್ಲಾ ವಕ್ತಾರ ಎಂ. ಎಂ. ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದಶಿರ್ ಲಿಂಗರಾಜ ಪಾಟೀಲ, ಜಗನ್ನಾಥಸಾ ಭಾಂಡಗೆ, ತೋಟೊಸಾ ಭಾಂಡಗೆ, ಬಿ. ಎಚ್​. ಲದ್ವಾ, ವಿಜಯಕುಮಾರ ಗಡ್ಡಿ, ಸಿದ್ದು ಪಲ್ಲೇದ, ಭಿಮಸಿಂಗ ರಾಠೋಡ, ರವಿ ದಂಡಿನ, ಭರತ್​ ಬೊಮ್ಮಾಯಿ, ನಗರಸಭಾ ಸದಸ್ಯರಾದ ವಿನಾಯಕ ಮಾನ್ವಿ, ಅನೀಲ ಅಬ್ಬಿಗೇರಿ, ಚಂದ್ರು ತಡಸದ, ಮಾಧುಸಾ ಮೇರವಾಡೆ, ನಾಗರಾಜ ತಳವಾರ, ಪ್ರಕಾಶ ಅಂಗಡಿ, ಮುತ್ತಣ್ಣ ಮುಶಿಗೇರಿ, ವಿದ್ಯಾವತಿ ಗಡಗಿ, ವಿಜಯಲಕ್ಷಿ$್ಮ ದಿಂಡೂರ, ಉಷಾ ದಾಸರ, ಸುರೇಶ ಚಿತ್ತರಗಿ, ಬೂದಪ್ಪ ಹಳ್ಳಿ, ಶಂಕರ ಕಾಕಿ, ಶಶಿಧರ ದಿಂಡೂರ, ಸಂತೋಷ ಅಕ್ಕಿ, ಅಮರನಾಥ ಗಡಗಿ, ಪ್ರಶಾಂತ ನಾಯ್ಕರ, ಶಿವು ಹಿರೇಮನಿಪಾಟೀಲ, ಸಿದ್ರಾಮೇಶ ಹಿರೇಮಠ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net