ಮನವಿ ಸಲ್ಲಿಸಿ ಮಾತನಾಡಿದ ಸಂದ ಜಿಲ್ಲಾಧ್ಯ ಹುಸೇನಸಾಬ ಕನಕವಾಡ, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 4.5 ಲ ಹೊರಗುತ್ತಿಗೆ ನೌಕರರ ಜೀವನಮಟ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪ್ರಸ್ತುತ ಜೀವನ ವೆಚ್ಚವನ್ನು ಪರಿಗಣಿಸಿ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಮಿರ್ಕ ಇಲಾಖೆಯಿಂದ ಕನಿಷ್ಟ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಆದೇಶ, ಕರಡು ಅಧಿಸೂಚನೆಯಲ್ಲಿ ನೌಕರರ ವೇತನ ವರ್ಗೀಕರಣವೂ ಉಲ್ಲೇಖವಿದೆ. ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಕರಡು, ಪ್ರಸ್ತಾವಿತ ಆದೇಶವನ್ನು ವಿಳಂಬ ಮಾಡದೆ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಪಾವತಿಸುವಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡುವುದು ಅತ್ಯವಶ್ಯವಿದೆ. ಸರ್ಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳಿಯ ಸಂಸ್ಥೆಗಳು ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೂ ಅನ್ವಯವಾಗುವಂತೆ ಸ್ಪಷ್ಟ ಆದೇಶ ಹೊರಡಿಸಲು ಸರ್ಕಾರದ ಮುಖ್ಯ ಕಾರ್ಯದಶಿರ್ಗಳಿಗೆ ಸಿಎಂ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.