ರಾಹುಲ್ ಗಾಂಧಿ ಮೇಲೆ FIR ಖಂಡಿಸಿ ಕಾಂಗ್ರೆಸ್ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೃಷ್ಣಗೌಡ ಪಾಟೀಲ, ನೀಲಮ್ಮ ಬೊಳನವರ, ಉಮರ್ ಫಾರೂಕ್ ಹುಬ್ಬಳ್ಳಿ, ಮಹ್ಮದ ಶಾಲಗಾರ, ಸುಜಾತಾ ದೊಡ್ಡಮನಿ, ಬಸವರಾಜ ಸುಂಕಾಪೂರ ಹಲವರು ಇದ್ದರು.
ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧಿಕರಣ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಆರ್ಎಸ್ಎಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪರವಾಗಿ ಧ್ವನಿ ಎತ್ತುವ ನಾಯಕರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ರಾಜಕೀಯ ದ್ವೇಷದ ಕ್ರಮವಾಗಿದೆ. ಸತ್ಯ ಮತ್ತು ಸಂವಿಧಾನದ ಪರವಾಗಿ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, ಮಲ್ಲಿಕಾರ್ಜುನ ರ್ಖಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧಿಕರಣ ಮಾಡಿರುವ ಟನೆ ಅತ್ಯಂತ ಖಂಡನೀಯ. ಇದು ದೇಶದ ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ಕೃತ್ಯಗಳಿಂದ ಕಾಂಗ್ರೆಸ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುವ ಮುಖಂಡ ಅಕ್ಷಯ ಪಾಟೀಲ ಕೇಂದ್ರ ಸರ್ಕಾರದ ನೀತಿಗಳು ಹಾಗೂ ಆರ್ಎಸ್ಎಸ್ ನ ಕಾರ್ಯ ವೈಖರಿ ಟಿಕೇಗೆ ಕಾರಣವಾಗಿದೆ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಜಾತ್ಯತಿತ ಆಶಯಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಜಿಪಂ ಮಾಜಿ ಅಧ್ಯಕ್ಷ ವಾಸಪ್ಪ ಕುರುಡಗಿ, ಬಸವರಾಜ ಕಡೇಮನಿ, ಪ್ರಭು ಬುರಬುರೆ ಹಲವರು ಇದ್ದರು.