ಮಾ. 14 ರಂದು ರಾಷ್ಟ್ರೀಯ ಲೋಕ ಅದಾಲತ್​

Gadag Court pressmeet
Gadag Court pressmeet
Published on
ರಾಜೀ ಸಂಧಾನದ ಮೂಲಕ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅವಕಾಶ: ನ್ಯಾಯಾಧೀಶೆ ನಾಗವೇಣಿ
ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ ಮಾ. 14 ರಂದು ರಾಷ್ಟ್ರೀಯ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯೆ ನಾಗವೇಣಿ ತಿಳಿಸಿದರು.
ನಗರದ ಜಿಲ್ಲಾ ಸತ್ರ ನ್ಯಾಯಾಲಯದ ವಿಡಿಯೋ ಕಾನ್ಫರನ್ಸ್​ ಹಾಲ್​ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್​ ಕುರಿತು ಏರ್ಪಡಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿ, ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳಲ್ಲಿ ಹಾಗೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ ಶ್ರೀ ಪರಿಹಾರ ಪಡೆದುಕೊಳ್ಳಲು ಇದೊಂದು ಸದಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಭಾಗವಹಿಸಿ ತಮಗಾಗುವ ಅಥಿರ್ಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದು. ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂರ್ಪೂಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 13 ಬೆಂಚ್​ ಗಳನ್ನು ರಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20187 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3175 ಪ್ರಕರಣಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಸಿವಿಲ್​ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧಿನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅಜಿರ್ಗಳು, ಕಾಮಿರ್ಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್​ ಭೌನ್ಸ್​ ಪ್ರಕರಣಗಳು, ಮೋಟರ್​ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್​ ಕಂಪೌಂಡಬಲ್​ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳು ಮೋಟಾರ್​ ವಾಹನ ಅಪಘಾತ ಪ್ರಕರಣಗಳು ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್​ ಕಂಪೌಂಡೇಬಲ್​ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾಗವೇಣಿ ತಿಳಿಸಿದರು .
ಜಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಸಿ.ಎಸ್​.ಶಿವನಗೌಡ್ರ ಮಾತನಾಡಿ ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳು ಮಾ. 14 ರಂದು ಜರುಗುವ ರಾಷ್ಟ್ರೀ ಲೋಕ ಅದಾಲತ್​ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಕಳೆದ ಡಿಸೆಂಬರ್​-2025 ರಂದು ಜರುಗಿದ ಲೋಕ ಅದಾಲತ್​ನಲ್ಲಿ 4560 ಚಾಲ್ತಿ ಪ್ರಕರಣಗಳನ್ನು ಹಾಗೂ 52487 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 32226 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ 8 ಕೌಟುಂಬಿಕ ಪ್ರಕರಣಗಳನ್ನು ಪುನ: ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು.
ಪ್ರಮುಖಾಂಶಗಳು:
* ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು.
* ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನ ಆಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.
* ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
* ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ರ್ಪೂಣವಾಗಿ ಮರುಪಾವತಿಸಲಾಗುವುದು.
* ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು.
* ಕಡಿಮೆ ಖಚಿರ್ನಲ್ಲಿ ಶ್ರೀ ತೀರ್ಮಾನಕ್ಕೆ ಇದೊಂದು ವಿಶೇಷ ಅವಕಾಶವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net