ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ವಿಚಾರಧಾರೆಗಳು ಸರ್ವರಿಗೂ ತಲುಪುವ ಕಾರ್ಯವಾಗಬೇಕು. ವಚನಗಳ ಮೂಲಕ ಸಮಾಜದ ಕಲ್ಯಾಣಕ್ಕಾಗಿ ಶ್ರಮಿಸಿದ ಜಗಜ್ಯೋತಿ ಬಸವೇಶ್ವರರ ತತ್ವಾದರ್ಶಗಳನ್ನು ಎಲ್ಲರಿಗೂ ತಿಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮಾಜದ ಹಿರಿಯರು, ಗಣ್ಯರು, ವಿವಿಧ ಸಂಘಟನೆಗಳು ಜಯಂತಿಯ ಯಶಸ್ವಿಗೆ ಕೈಜೋಡಿಸಬೇಕೆಂದರು.
ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಕಲಾ ತಂಡಗಳ ಆಯ್ಕೆ ಪ್ರಬಂಧ ಸ್ಪರ್ಧೆ ಆಯೋಜನೆ, ಸ್ತಬ್ದ ಚಿತ್ರ ಮೆರವಣಿಗೆ ಕುರಿತು ಚರ್ಚಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆಯ ಆಯೋಜನೆ ಕುರಿತು ವಿವಿಧ ಮುಖಂಡರು ತಮ್ಮ ತಮ್ಮ ಸಲಹೆಗಳನ್ನು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಸಮಾಜದ ಮುಖ್ಯಸ್ಥರು, ಗಣ್ಯರು ಹಿರಿಯರು ಹಾಜರಿದ್ದರು.
ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.