ಲಿಂಗ ತಾರತಮ್ಯ ಹಾಗೂ ವರದಕ್ಷಿಣಿ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ: ಸಿ.ಎಸ್​.ಶಿವನಗೌಡರ

 ಗದಗ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾರ್ಯಕ್ರಮದಲ್ಲಿ ಮಹಿಳಾ ದೌರ್ಜನ್ಯ ತಡೆ ಕುರಿತು ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಿ.ಎಸ್​. ಶಿವನಗೌಡರ, ಸಿ.ಆರ್​. ಮುಂಡರಗಿ,  ಸುವರ್ಣ ಪತ್ತಾರ, ರಾಧಾ ಮಣ್ಣೂರು, ಜಯಶ್ರೀ, ವಿಜಯಲಕ್ಷಿ$್ಮ ಗುರುಬಸವನಗೌಡರ, ಮಹಾಂತೇಶ ಸಜ್ಜನ, ಹರೀಶ ಜೋಗಿ, ಮಂಜುಳಾ ಸ್ವಾಮಿ ಇತರರು ಇದ್ದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾರ್ಯಕ್ರಮದಲ್ಲಿ ಮಹಿಳಾ ದೌರ್ಜನ್ಯ ತಡೆ ಕುರಿತು ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಿ.ಎಸ್​. ಶಿವನಗೌಡರ, ಸಿ.ಆರ್​. ಮುಂಡರಗಿ, ಸುವರ್ಣ ಪತ್ತಾರ, ರಾಧಾ ಮಣ್ಣೂರು, ಜಯಶ್ರೀ, ವಿಜಯಲಕ್ಷಿ$್ಮ ಗುರುಬಸವನಗೌಡರ, ಮಹಾಂತೇಶ ಸಜ್ಜನ, ಹರೀಶ ಜೋಗಿ, ಮಂಜುಳಾ ಸ್ವಾಮಿ ಇತರರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆ ಹಾಗೂ ವರದಕ್ಷಿಣೆ ಪದ್ಧತಿಯ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಡುವೆ ಸೌಹಾರ್ದಯುತ ವಾತಾವರಣ ಇರಬೇಕು, ಲಿಂಗ ತಾರತಮ್ಯ ಹಾಗೂ ವರದಕ್ಷಿಣೆ ಮುಕ್ತ ಸಮಾಜ ನಿರ್ಮಾಣ ಆಗುವುದಕ್ಕೆ ನಾವೆಲ್ಲರೂ ಕೈ ಜೋಡಿಸಬೇಕು ಎಂದು ದಿವಾನಿ ನ್ಯಾಯಾಧೀಶ ಸಿ. ಎಸ್​. ಶಿವನಗೌಡರ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ)ಅಧಿನಿಯಮ 2013ರ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ 1961, ಹಾಗೂ ವಧು-ವರದಕ್ಷಿಣೆ ನಿಷೇಧ ತಡೆಗಟ್ಟುವ ಕರ್ನಾಟಕ ನಿಯಮಗಳು 2004ರ ಹಿನ್ನೆಲೆಯಲ್ಲಿ ವರದಕ್ಷಿಣೆ ಪದ್ಧತಿಯನ್ನು ತಡೆಗಟ್ಟುವ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರು ಜಾಗೃತರಾಗಿರಬೇಕು. ಕಚೇರಿಯ ಸಿಬ್ಬಂದಿಗಳು ಮಹಿಳೆಯರ ಜೊತೆ ಮನೋಭಾವನೆಯಿಂದ ಇರಬೇಕು. ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರಿಗೆ ಬಡ್ತಿ ಅಥವಾ ಇತರ ಆಮಿಷಗಳನ್ನು ಒಡ್ಡಿ ಅವರನ್ನು ದುರುಪಯೋಗ ಪಡಿಸಿಕೊಳ್ಳುವುದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧ. ಯಾವುದೇ ತಪ್ಪು ಮಾಡದಿದ್ದಲ್ಲಿ ಮಹಿಳೆಯರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ತಾಲೂಕು ಮಟ್ಟ ಮತ್ತು ಗ್ರಾಮ ಮಟ್ಟದ ಕಚೇರಿಗಳಲ್ಲಿ ಒಬ್ಬ ನೂಡಲ್​ ಅಧಿಕಾರಿಯನ್ನು ನೇಮಿಸಬೇಕು. ಕೇವಲ ದ್ವೇಷ ಅಥವಾ ವೈಯಕ್ತಿಕ ಕಾರಣಗಳಿಗಾಗಿ ಅಧಿಕಾರಿಗಳ ಮೇಲೆ ಸುಳ್ಳು ದೂರು ನೀಡುವುದು ಸರಿಯಲ್ಲ. ಸುಳ್ಳು ದೂರು ನೀಡುವುದು ಸಾಬೀತಾದಲ್ಲಿ ದೂರುದಾರರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಹೇಳಿದರು.
ಕಚೇರಿಯಲ್ಲಿ ಮಹಿಳೆಯರ ಮೇಲೆ ಅಧಿಕಾರಿಗಳು ಕೆಲಸ ಕೊಡಿಸುವ ನಿಟ್ಟಿನಲ್ಲಿ ಅಸಭ್ಯ ವರ್ತನೆಯಿಂದ ನಡೆದುಕೊಳ್ಳಬಾರದು. ಕಚೇರಿಯ ಕೆಲಸಗಳು ಶಿಸ್ತಿನಿಂದ ನಡೆಯಲು ಹಿರಿಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ದೌರ್ಜನ್ಯ ಎಂದು ತಪ್ಪಾಗಿ ಅರ್ಥೈಸಬಾರದು. ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವುದು ನಮ್ಮ ಕರ್ತವ್ಯವಾಗಿದೆ. ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಎರಡೂ ಅಪರಾಧ. ಸಮಾಜದ ವಿವಿಧ ಹಂತಗಳಲ್ಲಿ ಇಂದಿಗೂ ಈ ಪದ್ಧತಿ ಜೀವಂತವಾಗಿದ್ದು, ಇದನ್ನು ಬೇರುಸಹಿತ ಕಿತ್ತೆಸೆಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಾರ್ವಜನಿಕ ಸಂಪರ್ಕದಲ್ಲಿರುವ ಇಲಾಖೆಯ ಸಿಬ್ಬಂದಿಗಳು ಜನಸಾಮಾನ್ಯರಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಪಂ ಉಪಕಾರ್ಯದಶಿರ್ ಸಿ. ಆರ್​. ಮುಂಡರಗಿ ಮಾತನಾಡಿ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಶೋಷಣೆ ಮತ್ತು ಲಿಂಗ ತಾರತಮ್ಯವನ್ನು ತಡೆಗಟ್ಟಲು ಜಿಲ್ಲಾ ಹಾಗೂ ಸ್ಥಳಿಯ ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಇಂದಿನ ದಿನಗಳಲ್ಲಿ ಹದಿಹರೆಯದ ಹೆಣ್ಣು ಮತ್ತು ಗಂಡು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹದಿಹರೆಯದ ವಯಸ್ಸು ಬಹಳ ಸೂಕ್ಷ$್ಮವಾದುದು. ಈ ಹಂತದಲ್ಲಿ ಮಕ್ಕಳು ದಾರಿ ತಪ್ಪದಂತೆ ಮತ್ತು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳುವುದು ಪೋಷಕರು ಹಾಗೂ ಸಮಾಜದ ಜವಾಬ್ದಾರಿ ಎಂದರು.
ಗ್ರಾಮೀಣ ಭಾಗದಲ್ಲಿ ವರದಕ್ಷಿಣೆ ಪಿಡುಗು ಮತ್ತು ವರದಕ್ಷಿಣೆ ಪದ್ಧತಿಯು ಇಂದಿಗೂ ಸಮಾಜಕ್ಕೆ ದೊಡ್ಡ ಪಿಡುಗಾಗಿ ಉಳಿದಿದೆ. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಇದರ ಪ್ರಭಾವ ಹೆಚ್ಚಿದೆ. ಈ ಪಿಡುಗನ್ನು ಹೋಗಲಾಡಿಸಲು ಕೇವಲ ಕಾನೂನು ಸಾಲದು, ಬದಲಾಗಿ ಜನರ ಆಲೋಚನಾ ಶೈಲಿಯಲ್ಲಿ ಬದಲಾವಣೆ ಬರಬೇಕು ಹಾಗೂ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಲಿಂಗ ತಾರತಮ್ಯ ಮತ್ತು ದೌರ್ಜನ್ಯ ತಡೆಗೆ ಆಂತರಿಕ ಸಮಿತಿ ಹಾಗೂ ಸ್ಥಳಿಯ ಸಮಿತಿಗಳ ಪಾತ್ರ ಬಹಳ ದೊಡ್ಡದಿದೆ. ಜಿಲ್ಲೆಯಲ್ಲಿ ಒಟ್ಟು 839 ಸಮಿತಿಗಳನ್ನು ರಚಿಸುವ ಗುರಿ ಹೊಂದಲಾಗಿದೆ ಪ್ರಸ್ತುತ 731 ಸಮಿತಿಗಳು ಈಗಾಗಲೇ ಅಸ್ತಿತ್ವಕ್ಕೆ ಬಂದಿವೆ. ಬಾಕಿ ಉಳಿದಿರುವ ಸಮಿತಿಗಳನ್ನು ಶ್ರೀದಲ್ಲಿ ರಚಿಸಿ, ಎಲ್ಲ ಸಮಿತಿಗಳು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ದೌರ್ಜನ್ಯ ತಡೆ ಕುರಿತು ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸುವರ್ಣ ಪತ್ತಾರ, ರಾಧಾ ಮಣ್ಣೂರು, ಜಯಶ್ರೀ, ವಿಜಯಲಕ್ಷಿ$್ಮ ಗುರುಬಸವನಗೌಡರ, ಮಹಾಂತೇಶ ಸಜ್ಜನ, ಹರೀಶ ಜೋಗಿ, ಮಂಜುಳಾ ಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net