ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ್​

 ಗದಗ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಗೀ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಡೆಂಗೀ ಜ್ವರ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಭಿತ್ತಿಪತ್ರವನ್ನು ಬಿಡುಗಡೆ ಗೊಳಿಸಲಾಯಿತು. ಸಿ.ಎನ್​. ಶ್ರಿಧರ, ಅನ್ನರ್ಪೂಣ ಶೆಟ್ಟರ, ಡಾ. ಎಸ್​. ಎಸ್​.ನೀಲಗುಂದ, ಡಾ. ಮೀನಾಕ್ಷಿ, ಡಾ. ಬಿ. ಸಿ. ಕರಿಗೌಡ್ರ, ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕಣಿರ್ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Published on
ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್​.ಶ್ರೀಧರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಡೆಂಗೀ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕ್ಯುನ್​ ಗುನ್ಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ವಿವಿಧ ಇಲಾಖೆಯ ಸಮನ್ವಯತೆಯೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು ಎಂದರು.
ಸಾರ್ವಜನಿಕ ನಳಗಳು ಹಾಗೂ ಕೊಳವೆ ಬಾವಿಗಳಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಿರುವ ಕುರಿತು ಪರಿಶೀಲನೆ ನಡೆಸಬೇಕು. ಸೊಳ್ಳೆ ನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿ ಆಗುತ್ತಿರುವ ಸ್ಥಳದಲ್ಲಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಸ್​ ಡಿಪೋಗಳಲ್ಲಿ ಖಾಲಿ ಟೈಯರಗಳಲ್ಲಿ ಹಾಗೂ ನ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್​.ಶ್ರೀಧರ ಹೇಳಿದರು.
ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಜ. 2026 ರಿಂದ ಏಪ್ರಿಲ್​ ವರೆಗೆ 120029 ರಕ್ತ ಲೇಪನ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. 2 ಮಲೇರಿಯಾ ಪ್ರಕರಣಗಳು ಖಚಿತಪಟ್ಟಿವೆ. ಡೆಂಗೀ ಪ್ರಕರಣಗಳಿಗೆ ಸಂಬಂಧಿಸಿದಂತೆ 607 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು 17 ಡೆಂಗೀ ಪ್ರಕರಣಗಳು ಖಚಿತಪಟ್ಟಿವೆ. ಚಿಕೂನ್​ ಗುನ್ಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ 109 ರಕ್ತದ ಮಾದರಿ ಪರೀಕ್ಷಿಸಲಾಗಿದ್ದು 7 ಚಿಕೂನ್​ ಗುನ್ಯಾ ಪ್ರಕರಣಗಳು ಖಚಿಪಟ್ಟಿವೆ ಎಂದರು.
ಇದೇ ಸಂದರ್ಭದಲ್ಲಿ ಡೆಂಗೀ ಜ್ವರ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಭಿತ್ತಿಪತ್ರವನ್ನು ಬಿಡುಗಡೆ ಗೊಳಿಸಲಾಯಿತು.
ಅನ್ನರ್ಪೂಣ ಶೆಟ್ಟರ, ಡಾ. ಎಸ್​. ಎಸ್​.ನೀಲಗುಂದ, ಡಾ. ಮೀನಾಕ್ಷಿ, ಡಾ. ಬಿ. ಸಿ. ಕರಿಗೌಡ್ರ, ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕಣಿರ್ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net