ಸೋಮವಾರ ಮಧ್ಯಾಹ್ನ 12 ಗಂಟೆಗೆ ಚಿತ್ರ ಪ್ರದರ್ಶನ ಆರಂಭಕ್ಕೆ ಶಾಂತಿ ಚಿತ್ರಮಂದಿರದಲ್ಲಿ ಸಿದ್ಧತೆ ನಡೆಯುತ್ತಿದ್ದ ಸಮಯದಲ್ಲೇ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಚಿತ್ರಮಂದಿರದ ಒಳಭಾಗದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಹಾಗೂ ಸ್ಥಳಿಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಂದಿಸಿದರು. ಬೆಂಕಿ ತೀವ್ರವಾಗಿದ್ದ ಕಾರಣ ಚಿತ್ರಮಂದಿರದ ರ್ಕುಚಿಗಳು, ಪರದೆಗಳು, ವಿದ್ಯುತ್ ತಂತಿಗಳು ಹಾಗೂ ಇತರ ಒಳಾಂಗಣ ವಸ್ತುಗಳು ಸಂರ್ಪೂಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಯಾವ ಅಚಾತುರ್ಯದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿಖರ ಕಾರಣ ತಿಳಿದು ಬಂದಿಲ್ಲ. ಪತ್ತೆಹಚ್ಚಲು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.