ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆಗ್ರಹ
ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ಕಾರಿ ನೌಕರ ಸಂಗದ ಪದಅಧಿಕಾರಿಗಳು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಮನವಿ ಸಲ್ಲಿಸಿದರು. ಬಸವರಾಜ ಬಳ್ಳಾರಿ, ರವಿ ಗುಂಜಿಕರ, ಡಿ. ಎಸ್. ತಳವಾರ, ಎಂ. ಎಂ. ನಿಟ್ಟಾಲಿ, ಎಂ. ವೈ. ಮಲಕಶೆಟ್ಟಿ, ರಾಜು ಕಂಟಿಗೊಣ್ಣವರ, ಸಿದ್ದಪ್ಪ ಲಿಂಗದಾಳ, ಎಸ್.ಎಸ್. ಪಾರ್ವತಿಮಠ, ಶಿವಪ್ಪ ಹದ್ಲಿ ಇತರರು ಇದ್ದರು.
ಚಿಕ್ಕಹಂದಿಗೋಳ ಗ್ರಾಮ ಪಂಚಾಯತ ಪಿಡಿಒ ಶಶಿಧರ ಕಪ್ಪರದ ಹಾಗೂ ವಾಟರ್ಮನ್ ಅರ್ಜುನ ಓಲೇಕಾರ ಅವರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಜಿಲ್ಲಾ ಸರ್ಕಾರಿ ನೌಕರ ಸಂದ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ಚಿಕ್ಕಹಂದಿಗೋಳ ಗ್ರಾಮ ಪಂಚಾಯತ ಪಿಡಿಒ ಶಶಿಧರ ಕಪ್ಪರದ ಹಾಗೂ ವಾಟರ್ಮನ್ ಅರ್ಜುನ್ ಓಲೇಕಾರ ಅವರು ಜೂ. 16ರಂದು ತಮ್ಮ ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ದುಂದೂರ ಗ್ರಾಮದ ಗಂಗಯ್ಯ ಗಣಾಚಾರಿ ಹಾಗೂ ಇತರರು ಮಾರಣಾಂತಿಕ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಹಿತದೃಷ್ಟಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದೆ. ಇದು ಸರ್ಕಾರಿ ಸೇವೆಯ ಕಾರ್ಯ ನಿರ್ವಹಣೆಗೆ ಅಡ್ಡಿಪಡಿಸುವ ಗಂಭೀರ ಅಪರಾಧವಾಗಿದೆ ಎಂದರು.
ನಿಕಟಪೂರ್ವ ಜಿಲ್ಲಾಧ್ಯಕ್ಷ ರವಿ ಗುಂಜಿಕರ ಮಾತನಾಡಿ ದಿನನಿತ್ಯ ಸಾರ್ವಜನಿಕರೊಂದಿಗೆ ಅತಿ ಹೆಚ್ಚು ಸಂಪರ್ಕ ಇರುವಂತಹ ಇಲಾಖೆಯಾದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ ಇಲಾಖೆಯಲ್ಲಿ ಇಂತಹ ಟನೆಗಳಿಂದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಯದ ವಾತಾವರಣ ಉಂಟಾಗಿದೆ. ಸಾರ್ವಜನಿಕ ಸೇವೆಗಳ ಮೇಲೂ ಪ್ರತಿಕೂಲ ಪರಿಣಾಮ ಬಿರುತ್ತಿದೆ. ಆದ್ದರಿಂದ, ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಲ್ಲೆ ನಡೆಸಿದ ತಪ್ಪಿತಸ್ಥ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಿಸಿ ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ಸರ್ಕಾರಿ ನೌಕರರು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿ ಮೇಲೆ ಸೂಕ್ತ ರಕ್ಷಣೆ ಒದಗಿಸಿ ಇಂತಹ ಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಡಿ. ಎಸ್. ತಳವಾರ, ಎಂ. ಎಂ. ನಿಟ್ಟಾಲಿ, ಎಂ. ವೈ. ಮಲಕಶೆಟ್ಟಿ, ರಾಜು ಕಂಟಿಗೊಣ್ಣವರ, ಸಿದ್ದಪ್ಪ ಲಿಂಗದಾಳ, ಎಸ್.ಎಸ್. ಪಾರ್ವತಿಮಠ, ಶಿವಪ್ಪ ಹದ್ಲಿ ಇತರರು ಇದ್ದರು.