ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 2023 ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆಯೇ ಅನ್ನಭಾಗ್ಯ, ಗೃಹಲಕ್ಷಿ$್ಮ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆಥಿರ್ಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ಮಾಸಿಕ ಭತ್ಯೆಯನ್ನು ಗರಿಷ್ಟ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.