ಸಚಿವ ಡಿ. ಸುಧಾಕರ ಅವರ ಅಗಲಿಕೆಗೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಸರಳತೆ, ಸೌಜನ್ಯ ಮತ್ತು ಜನಪರ ಮನೋಭಾವದಿಂದ ಜನರ ಮನಸ್ಸು ಗೆದ್ದಿದ್ದ ನಾಯಕರು. ರಾಜಕೀಯ ಜೀವನದಲ್ಲಿ ಸದಾ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅವರು ಅಭಿವೃದ್ಧಿ ಕಾರ್ಯಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು. ಸಾರ್ವಜನಿಕ ಬದುಕಿನಲ್ಲಿ ಶಿಸ್ತು, ನಿಷ್ಠೆ ಹಾಗೂ ಬದ್ಧತೆಯಿಂದ ಕಾರ್ಯ ನಿರ್ವಹಿಸಿದ ಅವರು ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದರು. ರೈತರು, ಬಡವರು ಹಾಗೂ ಸಾಮಾನ್ಯ ಜನರ ಪರ ಧ್ವನಿಯಾಗಿದ್ದರು. ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಧೀಮಂತ ಹಾಗೂ ಅನುಭವ ಸಂಪನ್ನ ನಾಯಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.